ಬೆಂಗಳೂರು: ಕೊರೊನಾ ಕಾಲದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ?’ ಎಂದು ಪ್ರಶ್ನಿಸಿದ್ದಾರೆ.


ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು AAPಯಿಂದ ಕದ್ದಿರುವುದು!


‘ಶಾಸಕರಾದ ಬಸನಗೌಡ ಪಾಟೀಲ್ ಅವರು ಹಿಟ್ ಅಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ  ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲಾ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಯಡಿಯೂರಪ್ಪ ಶಕುನಿ ಎಂದ ಯತ್ನಾಳ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ


ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.