ನಿರೀಕ್ಷೆಯಂತೆ ಸತ್ಯಪಾಲ್ ಮಲಿಕ್ ಮನೆ ಮೇಲೆ ಸಿಬಿಐ ದಾಳಿ - ಸಿದ್ದರಾಮಯ್ಯ ಆರೋಪ

ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ  ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Ranjitha R K | Last Updated : Feb 23, 2024, 04:17 PM IST
  • ಮಲಿಕ್ ಮನೆ ಮೇಲೆ ಸಿಬಿಐ ದಾಳಿ ನಿರೀಕ್ಷೆ ಮಾಡಲಾಗಿತ್ತು
  • ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟ ಕೇಂದ್ರ ಸರ್ಕಾರ
  • ಮಾಧ್ಯಮ ಪ್ರಕಟಣೆಯಲ್ಲಿ ಸಿಎಂ ಸಿದ್ದರಾಮಯ್ಯ
ನಿರೀಕ್ಷೆಯಂತೆ  ಸತ್ಯಪಾಲ್ ಮಲಿಕ್ ಮನೆ ಮೇಲೆ ಸಿಬಿಐ ದಾಳಿ  - ಸಿದ್ದರಾಮಯ್ಯ ಆರೋಪ  title=

ಬೆಂಗಳೂರು : 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ ಕಿಡಿ ಕಾರಿದ್ದಾರೆ. 

ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧದ ಮಲಿಕ್ ಮಾಡಿರುವ ಆರೋಪವನ್ನು ತಳ್ಳಿಹಾಕಳು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ  ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯ ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು ಎದ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ಇದನ್ನೂ ಓದಿ : ವ್ಯಾಪಾರ ಸಂಬಂಧ ಗಟ್ಟಿಗೊಳಿಸಲು ಅಮೆರಿಕಾದ ಅಮ್’ಚಾಮ್ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರದ ಒಪ್ಪಂದ

ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎದ್ನು ಅವರು ಅಭಿಪ್ರಾಯಪಟ್ಟಿದ್ದಾರೆ. 

ಇದನ್ನೂ ಓದಿ : ಬಿಸಿಲ ಧಗೆ ಏರುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಸರ್ಪಗಳ ಕಾಟ! ನೆಲದೊಳಗಿದ್ದ ಎದ್ದು ಬರುತ್ತಿವೆ ವಿಷಕಾರಿ ಸರ್ಪಗಳು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News