ಬೆಂಗಳೂರು: ಸುಳ್ಳು ಸುದ್ದಿಯ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ ಮುಖಂಡ ಸಿಟಿ ರವಿ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ‘ಸಿಟಿ ರವಿ ಮತ್ತು ಅಶ್ವಥ್ ನಾರಾಯಣ್ ಅವರು ಫೇಕ್ ನ್ಯೂಸ್ ಪೆಡ್ಲರ್‌ಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಗೌರವಾನ್ವಿತ ಮಾಜಿ ಶಾಸಕ ಸಿಟಿ ರವಿಯವರೇ, ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದುಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ. ನಿಮ್ಮ ಗಮನಕ್ಕಾಗಿ ಈ ಪೂರ್ತಿ ವಿಡಿಯೋ ಎಂದು ಅಸಲಿ ವಿಡಿಯೋ ಹಂಚಿಕೊಂಡು’ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

‘ನಾವು ನುಡಿದಂತೆ ನಡೆಯುವವರು, ಹಿಂದೆ 2013 - 18ರ 5 ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರದರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು’ ಎಂದು ಟೀಕಿಸಿದ್ದಾರೆ.


ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್‌ ಅಹಿಂಸಾ ವಿರುದ್ದ FIR ದಾಖಲು!


‘ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ. ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ? ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವಿಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ’ ಎಂದು ಕುಟುಕಿದ್ದಾರೆ.


‘ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಕೂಡ ಇದೇ ರೀತಿ ವಿಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ. ನೀವು ಶೇರ್ ಮಾಡಿರುವ ತಿರುಚಿದ  ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ. ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


ಅಪ್ರಾಪ್ತ ಬಾಲಕನಿಗೆ ಬೈಕ್ ಕೊಟ್ಟ ತಂದೆಗೆ ಭಾರೀ ದಂಡ!


‘ಬಿಜೆಪಿ ನಾಯಕರೇ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ನೀವು ಶೇರ್ ಮಾಡಿರುವ ವಿಡಿಯೋ ಡಿಲೀಟ್ ಮಾಡಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ "ಬೊಗಳೆ ಜನತಾ ಪಾರ್ಟಿ" ಎಂಬ ಕುಖ್ಯಾತಿಯನ್ನು ದೃಢೀಕರಿಸಿಸುವಂತಿದೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.


‘ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ. ಪ್ರಧಾನಿ ಮೋದಿಯವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ "ಫೇಕ್ ನ್ಯೂಸ್ ಪೆಡ್ಲರ್" ಗಳಾದ ಸಿಟಿ ರವಿ ಮತ್ತು ಅಶ್ವತ್ಥ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ’ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.