ನನಗೊಂದು ನೀತಿ, ಕುಮಾರಸ್ವಾಮಿಗೆ ಒಂದು ನೀತಿನಾ?: ರಾಜ್ಯಪಾಲರ ನಡೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

HD Kumaraswamy vs Siddaramaiah: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾರತಮ್ಯ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ. 

Written by - Puttaraj K Alur | Last Updated : Aug 21, 2024, 07:15 PM IST
  • ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ
  • ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ
  • ನನಗೊಂದು ನೀತಿ, ಕುಮಾರಸ್ವಾಮಿಗೆ ಒಂದು ನೀತಿನಾ? ಎಂದು ಪ್ರಶ್ನೆ
ನನಗೊಂದು ನೀತಿ, ಕುಮಾರಸ್ವಾಮಿಗೆ ಒಂದು ನೀತಿನಾ?: ರಾಜ್ಯಪಾಲರ ನಡೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ! title=
ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ!

HD Kumaraswamy vs Siddaramaiah: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ತನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿ ಆಧರಿಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಸಿಎಂ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ.ಕುಮಾರಸ್ವಾಮಿಯವರು ದಾಖಲಾತಿ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಸಿದ್ದರಾಮಯ್ಯನವರು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಅಂಡ್‌ ರನ್ ಕೇಸ್ ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಜಧಾನಿಗೆ ಲಗ್ಗೆ ಇಟ್ಟಿದೆ ಡೆಡ್ಲಿ ಝೀಕಾ ವೈರಸ್..!

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ನಮ್ಮ ಸರ್ಕಾರವು ಅಭಿವೃದ್ಧಿ ಕೆಲಸದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದು ಭರವಸೆ ನೀಡಿದರು.

ಇನ್ನು ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ತಿಳಿಸಿದ ಸಿದ್ದರಾಮಯ್ಯ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿ ಪ್ರಾಸಿಕ್ಯೂಷನ್ ಅಸ್ತ್ರಕ್ಕೆ ಕಾಂಗ್ರೆಸ್‌ ಪ್ರತ್ಯಾಸ್ತ್ರ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News