ಅಧಿಕಾರವಿಲ್ಲದೆ ಹತಾಶರಾಗಿರುವ ಕುಮಾರಸ್ವಾಮಿ ಆರೋಪ ಹಿಟ್ ಅಂಡ್ ರನ್ ಇದ್ದಂತೆ: ಸಿದ್ದರಾಮಯ್ಯ

CM Siddaramaiah Slams HD Kumaraswamy: ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ  ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Jul 6, 2023, 05:01 PM IST
  • ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ
  • ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುವ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ
  • ಎಚ್‍ಡಿಕೆ ಸಿಎಂ ಆಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ?
ಅಧಿಕಾರವಿಲ್ಲದೆ ಹತಾಶರಾಗಿರುವ ಕುಮಾರಸ್ವಾಮಿ ಆರೋಪ ಹಿಟ್ ಅಂಡ್ ರನ್ ಇದ್ದಂತೆ: ಸಿದ್ದರಾಮಯ್ಯ  title=
ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ YST ಟ್ಯಾಕ್ಸ್ ಜಾರಿಗೆ ಬಂದಿದೆ. ಯತೀಂದ್ರ ಸಿದ್ದರಾಮಯ್ಯ ಶ್ಯಾಡೋ ಸಿಎಂ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. #HitAndRunHDK ಹ್ಯಾಶ್‍ಟ್ಯಾಗ್ ಬಳಸಿ ಗುರುವಾರ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ  ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರಾ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ’ ಅಂತಾ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: "ಕುಮಾರಸ್ವಾಮಿ ಅವರು ಕೇವಲ ಆರೋಪ ಮಾಡುತ್ತಿದ್ದಾರೆ ಹೊರತು ಒಂದು ಆರೋಪವನ್ನು ಸಾಬೀತು ಮಾಡಿಲ್ಲ"

‘ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿಯವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ  ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗಣಿ ಜಿಲ್ಲೆಗೆ ದೊರೆಯುವುದೇ ವಿಶೇಷ ಉಡುಗೊರೆ..ರಾಜ್ಯ ಬಜೆಟ್ ಮೇಲೆ ಹೆಚ್ಚಿದ ಜಿಲ್ಲೆಯ ಜನರ ನಿರೀಕ್ಷೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News