ಬೆಂಗಳೂರು: ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತು ಹಾಕಿರುವುದು ಬಿಜೆಪಿಯ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿ. ಇದು ಅತ್ಯಂತ ಖಂಡನೀಯ ಕೃತ್ಯವೆಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
#BJPagainstConstitution ಹ್ಯಾಶ್‍ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘1949ರ ಸಂವಿಧಾನದ ಪ್ರತಿಯನ್ನೇ ನೀಡಲಾಗಿದೆ ಎನ್ನುವುದು ತಮ್ಮೊಳಗಿನ ದುಷ್ಟ ಆಲೋಚನೆಯನ್ನು ಮುಚ್ಚಿಕೊಳ್ಳುವ ಪ್ರಯತ್ನವಾಗಿದೆ. ತಿದ್ದುಪಡಿಯಾದ ನಂತರ ಪರಿಷ್ಕೃತ ಪ್ರತಿಯನ್ನು ನೀಡಬೇಕಾಗಿರುವುದು ನ್ಯಾಯವೂ ಹೌದು, ಧರ್ಮವೂ ಹೌದು. 1976ರಲ್ಲಿಯೇ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡಿ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಎಂಬ ಪದಗಳನ್ನು ಸೇರಿಸಲಾಗಿತ್ತು. ಈ ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ’ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ!
1949ರ ಸಂವಿಧಾನದ ಪ್ರತಿಯನ್ನೇ ನೀಡಲಾಗಿದೆ ಎನ್ನುವುದು ತಮ್ಮೊಳಗಿನ ದುಷ್ಟ ಆಲೋಚನೆಯನ್ನು ಮುಚ್ಚಿಕೊಳ್ಳುವ ಪ್ರಯತ್ನವಾಗಿದೆ. ತಿದ್ದುಪಡಿಯಾದ ನಂತರ ಪರಿಷ್ಕೃತ ಪ್ರತಿಯನ್ನು ನೀಡಬೇಕಾಗಿರುವುದು ನ್ಯಾಯವೂ ಹೌದು, ಧರ್ಮವೂ ಹೌದು.
1976ರಲ್ಲಿಯೇ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡಿ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಎಂಬ ಪದಗಳನ್ನು…
— Siddaramaiah (@siddaramaiah) September 21, 2023
‘ಸಂವಿಧಾನದ ಬಗ್ಗೆ ಬಿಜೆಪಿ ಮತ್ತು ಅದರ ಮಾತೃಸಂಸ್ಥೆಯಾಗಿರುವ RSSಗೆ ಇರುವ ವಿರೋಧಕ್ಕೆ ಇತಿಹಾಸ ಸಾಕ್ಷಿ. ಸಂವಿಧಾನವನ್ನು ದೇಶ ಒಪ್ಪಿಕೊಂಡ ಕಾಲದಲ್ಲಿಯೇ RSS ಅದನ್ನು ವಿರೋಧಿಸಿತ್ತು. ಈ ಸಂವಿಧಾನದಲ್ಲಿ ಭಾರತೀಯತೆ ಇಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದನ್ನು ಮರೆಯಲಾಗದು. ಅಟಲ್‌ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನದ ಪುನರ್ ಪರಿಶೀಲನೆಗೊಳಪಡಿಸುವ ವಿಫಲ ಪ್ರಯತ್ನ ನಡೆದಿರುವುದನ್ನು ದೇಶದ ಜನತೆ ಮರೆತಿಲ್ಲ. ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರದ ಕಾಲದಲ್ಲಿ ಬಿಜೆಪಿ ನಾಯಕರು ಮತ್ತು ಸಂಸದರು ನಿರಂತರವಾಗಿ ಸಂವಿಧಾನದ ಮೇಲೆ ದಾಳಿ ನಡೆಸಿದ್ದಕ್ಕೆ ದೇಶ ಸಾಕ್ಷಿಯಾಗಿದೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
‘ಸಂವಿಧಾನವನ್ನು ಬದಲಾಯಿಸಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅನಂತ್‌ಕುಮಾರ ಹೆಗಡೆ ಎಂಬ ರಾಜ್ಯದ ಸಂಸದ ನೀಡಿದ್ದ ಬೇಜವಾಬ್ದಾರಿ ಹೇಳಿಕೆಯನ್ನು ಕನಿಷ್ಠ ಖಂಡಿಸುವ ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳುವ ಕೆಲಸವನ್ನೂ ಪ್ರಧಾನಿ ಮೋದಿ ಸರ್ಕಾರ ಮಾಡದಿರುವುದು ಆ ಪಕ್ಷದ ಅಂತರಂಗದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ನೇರಾನೇರವಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಧೈರ್ಯ ಇಲ್ಲದ ಬಿಜೆಪಿ ಮತ್ತು ಕೇಂದ್ರ ಸರ್ಕಾರ, ಈ ರೀತಿ ಅಡ್ಡದಾರಿ ಹಿಡಿದು ಸಂವಿಧಾನದ ಆಶಯಗಳನ್ನು ಅಳಿಸಿಹಾಕುವ ಪ್ರಯತ್ನ ನಡೆಸುತ್ತಿದೆ. ಅಂತಿಮವಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮನುಧರ್ಮ ಶಾಸ್ತ್ರವನ್ನು ಜಾರಿಗೊಳಿಸುವ ಗುಪ್ತ ಅಜೆಂಡಾದ ಭಾಗವಾಗಿಯೇ ಈ ಎಲ್ಲಾ ಕಸರತ್ತುಗಳು ನಡೆಯುತ್ತಿರುವಂತೆ ಕಾಣುತ್ತಿದೆ’ ಎಂದು ಸಿದ್ದರಾಮಯ್ಯ ಆಂತಕ ವ್ಯಕ್ತಪಡಿಸಿದ್ದಾರೆ.
ಸಂವಿಧಾನವನ್ನು ಬದಲಾಯಿಸಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅನಂತ್‌ಕುಮಾರ ಹೆಗಡೆ ಎಂಬ ರಾಜ್ಯದ ಸಂಸದ ನೀಡಿದ್ದ ಬೇಜವಾಬ್ದಾರಿ ಹೇಳಿಕೆಯನ್ನು ಕನಿಷ್ಠ ಖಂಡಿಸುವ ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳುವ ಕೆಲಸವನ್ನೂ @narendramodi ಸರ್ಕಾರ ಮಾಡದೆ ಇರುವುದು ಆ ಪಕ್ಷದ ಅಂತರಂಗದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ.
ನೇರಾನೇರವಾಗಿ…— Siddaramaiah (@siddaramaiah) September 21, 2023
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಪ್ರತಿಭಟನೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.