ಅಡ್ಡದಾರಿ ಮೂಲಕ ಬಿಜೆಪಿಯಿಂದ ಸಂವಿಧಾನದ ಆಶಯ ಅಳಿಸಿಹಾಕುವ ಪ್ರಯತ್ನ: ಸಿದ್ದರಾಮಯ್ಯ
‘’ಸಮಾಜವಾದಿ’’ ಮತ್ತು `ಜಾತ್ಯತೀತ` ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಂಗಳೂರು: ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತು ಹಾಕಿರುವುದು ಬಿಜೆಪಿಯ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿ. ಇದು ಅತ್ಯಂತ ಖಂಡನೀಯ ಕೃತ್ಯವೆಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
#BJPagainstConstitution ಹ್ಯಾಶ್‍ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘1949ರ ಸಂವಿಧಾನದ ಪ್ರತಿಯನ್ನೇ ನೀಡಲಾಗಿದೆ ಎನ್ನುವುದು ತಮ್ಮೊಳಗಿನ ದುಷ್ಟ ಆಲೋಚನೆಯನ್ನು ಮುಚ್ಚಿಕೊಳ್ಳುವ ಪ್ರಯತ್ನವಾಗಿದೆ. ತಿದ್ದುಪಡಿಯಾದ ನಂತರ ಪರಿಷ್ಕೃತ ಪ್ರತಿಯನ್ನು ನೀಡಬೇಕಾಗಿರುವುದು ನ್ಯಾಯವೂ ಹೌದು, ಧರ್ಮವೂ ಹೌದು. 1976ರಲ್ಲಿಯೇ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡಿ ‘’ಸಮಾಜವಾದಿ’’ ಮತ್ತು "ಜಾತ್ಯತೀತ" ಎಂಬ ಪದಗಳನ್ನು ಸೇರಿಸಲಾಗಿತ್ತು. ಈ ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ’ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ!
ಸಿದ್ದರಾಮಯ್ಯ ಆಂತಕ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಪ್ರತಿಭಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.