ಬೆಂಗಳೂರು: ನಿರುದ್ಯೋಗ ಮತ್ತು ಬಡತನ ಹೆಚ್ಚಾಗುವಾಗಲೇ ದೇಶದಲ್ಲಿ ದ್ವೇಷವನ್ನು ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಅರಮನೆ ಮೈದಾನದಲ್ಲಿ ಬುಧವಾರ ಇಂಡಿಯನ್ ಯೂತ್ ಕಾಂಗ್ರೆಸ್ ಆಯೋಜಿಸಿದ್ದ "ಉತ್ತಮ ಭಾರತದ ಅಡಿಪಾಯ" ರಾಷ್ಟ್ರೀಯ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ, ವೈಜ್ಞಾನಿಕ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಈ ಸಮಾವೇಶ ನಮ್ಮ ಭಾರತವನ್ನು ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದಲ್ಲಿ ಮತ್ತೆ ಎತ್ತಿ ನಿಲ್ಲಿಸಲು ನೆರವಾಗುತ್ತದೆ’ ಎಂದು ಹೇಳಿದ್ದಾರೆ.
ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ, ಬೆಲೆ ಏರಿಕೆ ಕಾರಣದಿಂದ ಬಡವರು-ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ @BJP4India ಪಕ್ಷದ ದ್ವೇಷ ರಾಜಕಾರಣ ಇಡಿ ದೇಶವನ್ನು ಆವರಿಸುತ್ತಿದೆ.
ದ್ವೇಷ ಅಳಿಸಿ ಪ್ರೀತಿಯ ಭಾರತವನ್ನು ಪುನರ್ ನಿರ್ಮಿಸಲು "ಉತ್ತಮ ಭಾರತದ ಅಡಿಪಾಯ" ಸಮಾವೇಶ ಸಹಕಾರಿಯಾಗಲಿದೆ. 2/7
#BuniyaadIndiaKi 🇮🇳 pic.twitter.com/usrpsshutQ— Siddaramaiah (@siddaramaiah) July 26, 2023
‘ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ, ಬೆಲೆ ಏರಿಕೆ ಕಾರಣದಿಂದ ಬಡವರು-ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ ಬಿಜೆಪಿ ದ್ವೇಷ ರಾಜಕಾರಣ ಇಡಿ ದೇಶವನ್ನು ಆವರಿಸುತ್ತಿದೆ. ದ್ವೇಷ ಅಳಿಸಿ ಪ್ರೀತಿಯ ಭಾರತವನ್ನು ಪುನರ್ ನಿರ್ಮಿಸಲು "ಉತ್ತಮ ಭಾರತದ ಅಡಿಪಾಯ" ಸಮಾವೇಶ ಸಹಕಾರಿಯಾಗಲಿದೆ. ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ಮೋದಿಯವರು ಪ್ರಧಾನಿಯಾದ ಬಳಿಕ ಬಿಜೆಪಿ-RSS ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ
ನಿರುದ್ಯೋಗ, ಬಡತನ ಹೆಚ್ಚಾಗುವಾಗಲೇ ದೇಶದಲ್ಲಿ ದ್ವೇಷವನ್ನು ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ. ನೆಹರೂ ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ, ವೈಜ್ಞಾನಿಕ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು @narendramodi ಅವರು ಪ್ರಧಾನಿ ಆದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಈ ಸಮಾವೇಶ ನಮ್ಮ…
— Siddaramaiah (@siddaramaiah) July 26, 2023
‘ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ಈ ರೈತ-ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ’ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಕಾಂಗ್ರೆಸ್ ಸಂವಿಧಾನದ ಆಶಯಗಳಿಗೆ ಬದ್ಧವಾಗಿದೆ. ಕಾರ್ಮಿಕರು, ಮಹಿಳೆಯರು, ದಲಿತ, ಶೂದ್ರರು, ಹಿಂದುಳಿದವರು ಹೀಗೆ ಎಲ್ಲಾ ಜಾತಿಯ ಬಡವರ ಬದುಕನ್ನು ಉನ್ನತೀಕರಿಸುವ ಮತ್ತು ಈ ಎಲ್ಲಾ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ಅಭಿಯಾನವನ್ನು ಕಾಂಗ್ರೆಸ್ ನಿರಂತರವಾಗಿ ನಡೆಸುತ್ತಾ ಬಂದಿದೆ. ಸಾಮಾಜಿಕ ನ್ಯಾಯದ ಪರಂಪರೆಯನ್ನು ಮುನ್ನಡೆಸುವ ರಥವೆಂದರೆ ಅದು ಕಾಂಗ್ರೆಸ್ ಪಕ್ಷ’ವೆಂದು ಅವರು ಹೇಳಿದ್ದಾರೆ.
ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು @narendramodi ಅವರು ಪ್ರಧಾನಿ ಆದ ಬಳಿಕ ಬಿಜೆಪಿ - ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.
ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ @BJP4India ಪರಿವಾರ ಈ ರೈತ-ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ… pic.twitter.com/vOzPbVl1xg— Siddaramaiah (@siddaramaiah) July 26, 2023
‘ಬಿಜೆಪಿ ಪರಿವಾರ ಅಧಿಕಾರಕ್ಕೆ ಬಂದು ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆಯನ್ನು ಹಾಳುಗೆಡವಿದ್ದಾರೆ. ಕೇವಲ 9 ವರ್ಷದಲ್ಲಿ 118 ಲಕ್ಷ ಕೋಟಿ ರೂ. ಸಾಲ ಮಾಡಿ ದೇಶದ ಸಾಲವನ್ನು 170 ಲಕ್ಷ ಕೋಟಿ ರೂ.ಗೆ ಏರಿಸಿದ್ದಾರೆ. ಕಳೆದ 75 ವರ್ಷಗಳಿಂದ ಇದ್ದ ದೇಶದ ಸಾಲ 53 ಲಕ್ಷ ಕೋಟಿ ರೂ. ಮಾತ್ರ. ಈ ಸಾಲವನ್ನು 170 ಲಕ್ಷ ಕೋಟಿ ರೂ.ಗೆ ಏರಿಸಿದ ಕುಖ್ಯಾತಿ ಪ್ರಧಾನಿ ಮೋದಿ ಮತ್ತು ಬಿಜೆಪಿ-RSS ಪರಿವಾರದ್ದು’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇದನ್ನೂ ಓದಿ: ಸಂಸದ ಸಿದ್ದೇಶ್ವರ ಅವರಿಗೆ ವಿಡಿಯೋ ಕಾಲ್ ಮಾಡಿ ಮಹಿಳೆಯಿಂದ ಅಶ್ಲೀಲ ವರ್ತನೆ, ದೂರು ದಾಖಲು
‘ಆದಿಕವಿ ಪಂಪ 'ಮನುಷ್ಯ ಜಾತಿ ತಾನೊಂದೇ ವಲಂ' ಎಂದು ಹೇಳಿದ್ದರು. ಇಂತಹ ಮಾನವೀಯತೆ, ವೈವಿಧ್ಯತೆ ಮತ್ತು ಏಕತೆಯನ್ನು ವಿಶ್ವಕ್ಕೆ ಸಾರಿದ ನೆಲ ನಮ್ಮದು. ನಮ್ಮ ಸಂವಿಧಾನ ಕೂಡ ಇದೇ ಮೌಲ್ಯವನ್ನು ಎತ್ತಿ ಹಿಡಿದಿದೆ. ಈ ನೆಲದಲ್ಲಿ ನಡೆಯುತ್ತಿರುವ "ಉತ್ತಮ ಭಾರತದ ಬುನಾದಿ" ಯುವ ಸಮಾವೇಶ ಇಡೀ ದೇಶದಲ್ಲಿ ಪ್ರತಿಧ್ವನಿಸಲಿದೆ’ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.