ಬೆಂಗಳೂರು: ನಿರುದ್ಯೋಗ ಮತ್ತು ಬಡತನ ಹೆಚ್ಚಾಗುವಾಗಲೇ ದೇಶದಲ್ಲಿ ದ್ವೇಷವನ್ನು ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಅರಮನೆ ಮೈದಾನದಲ್ಲಿ ಬುಧವಾರ ಇಂಡಿಯನ್ ಯೂತ್ ಕಾಂಗ್ರೆಸ್ ಆಯೋಜಿಸಿದ್ದ "ಉತ್ತಮ ಭಾರತದ ಅಡಿಪಾಯ" ರಾಷ್ಟ್ರೀಯ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.


COMMERCIAL BREAK
SCROLL TO CONTINUE READING

‘ಮಾಜಿ ಪ್ರಧಾನಿ ಜವಾಹರ‌ಲಾಲ್ ನೆಹರು ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ, ವೈಜ್ಞಾನಿಕ‌ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಈ ಸಮಾವೇಶ ನಮ್ಮ ಭಾರತವನ್ನು ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದಲ್ಲಿ ಮತ್ತೆ ಎತ್ತಿ ನಿಲ್ಲಿಸಲು ನೆರವಾಗುತ್ತದೆ’ ಎಂದು ಹೇಳಿದ್ದಾರೆ.


ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ


ಸಂಸದ ಸಿದ್ದೇಶ್ವರ ಅವರಿಗೆ ವಿಡಿಯೋ ಕಾಲ್ ಮಾಡಿ ಮಹಿಳೆಯಿಂದ ಅಶ್ಲೀಲ ವರ್ತನೆ, ದೂರು ದಾಖಲು


‘ಆದಿಕವಿ ಪಂಪ 'ಮನುಷ್ಯ ಜಾತಿ ತಾನೊಂದೇ ವಲಂ' ಎಂದು ಹೇಳಿದ್ದರು. ಇಂತಹ ಮಾನವೀಯತೆ, ವೈವಿಧ್ಯತೆ ಮತ್ತು ಏಕತೆಯನ್ನು ವಿಶ್ವಕ್ಕೆ ಸಾರಿದ ನೆಲ ನಮ್ಮದು. ನಮ್ಮ ಸಂವಿಧಾನ ಕೂಡ ಇದೇ ಮೌಲ್ಯವನ್ನು ಎತ್ತಿ ಹಿಡಿದಿದೆ. ಈ ನೆಲದಲ್ಲಿ ನಡೆಯುತ್ತಿರುವ "ಉತ್ತಮ ಭಾರತದ ಬುನಾದಿ" ಯುವ ಸಮಾವೇಶ ಇಡೀ ದೇಶದಲ್ಲಿ ಪ್ರತಿಧ್ವನಿಸಲಿದೆ’ ಎಂದು ಅವರು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.