ದಾವಣಗೆರೆ: ಪ್ರಧಾನಿ ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಮಾಡಿದ್ದೇನು ಅನ್ನೋದನ್ನು ಭಾರತೀಯರಿಗೆ ತಿಳಿಸಿ ಮತವನ್ನು ಕೇಳುತ್ತಿಲ್ಲ. ಬದಲಿಗೆ ಅವರು ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಶನಿವಾರ ನಡೆದ ʼಪ್ರಜಾಧ್ವನಿ ಜನಸಮಾವೇಶʼದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿದರು. 


COMMERCIAL BREAK
SCROLL TO CONTINUE READING

ʼದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ವಿನಯ್‌ಗೆ ಓಟು ಹಾಕಿದರೆ, ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. 


Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!


ʼದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ‌ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.


Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!


ಸಿದ್ದರಾಮಯ್ಯ ಮನವಿ ಮಾಡಿಕೊಂಡರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.