ಬೆಂಗಳೂರು: GST ಬಾಕಿ, ಬರ ಪರಿಹಾರ ಸೇರಿದಂತೆ ಕರ್ನಾಟಕಕ್ಕೆ ನೀಡುವ ಎಲ್ಲಾ ರೀತಿಯ ಸೌಲಭ್ಯ ಮತ್ತು ಪರಿಹಾರಗಳಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಈ ಹಿಂದೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದೀಗ ಅದೇ ವಿಚಾರವಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  


COMMERCIAL BREAK
SCROLL TO CONTINUE READING

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ. ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ’ ಎಂದು ಟೀಕಿಸಿದ್ದಾರೆ.


ಯುಟ್ಯೂಬ್ ನೋಡಿ ರೋಗಿಗೆ 6 ಬಾರಿ ಚಿಕಿತ್ಸೆ!


ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಪ್ರಧಾನಿ ಮೋದಿಯವರು ಸದಾ ಪಲಾಯನ ಮಾಡುತ್ತಾರೆ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ ಮತ್ತು ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


‘ಪ್ರಧಾನಿ ಮೋದಿ ಮಂತ್ರವಿಷ್ಟೇ… ಕಡೆಗಣಿಸು, ನಿರ್ಲಕ್ಷಿಸು, ನಿದ್ರಿಸು ಮತ್ತದನ್ನೇ ಪುನರಾವರ್ತಿಸು! ಇನ್ನು ಬಿಜೆಪಿ ಸಂಸದರ ಮಂತ್ರ… ಬಾಯಿಗೆ ಬೀಗ ಹಾಕಿಕೊಂಡಿರು. ಪ್ರಧಾನಿ ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು! ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು’ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.


ಇದನ್ನೂ ಓದಿ: ಜಿಲ್ಲಾಧ್ಯಕ್ಷರ ಜೊತೆಗೆ ಬಿ.ವೈ.ವಿಜಯೇಂದ್ರ ಮೀಟಿಂಗ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.