ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿಪಕ್ಷ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಜಾತಿ-ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ಧಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.


‘ಟಿಕೆಟ್ ಕೊಡಿ ಅಜ್ಜಿ’ ಎಂದಿದ್ದಕ್ಕೆ ವಿದ್ಯಾರ್ಥಿನಿಗೆ ಮೇಲೆ ಮಹಿಳಾ ಕಂಡಕ್ಟರ್ ಹಲ್ಲೆ!


ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ: ಸಿಎಂ ಸಿದ್ದರಾಮಯ್ಯ


ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.   


ಇದನ್ನೂ ಓದಿ: ಕಾಮನ್ ಮ್ಯಾನ್‌ಗೆ ಮಾತ್ರವಲ್ಲ ಸಿಎಂಗೂ ತಟ್ಟಿದ ಟ್ರಾಫಿಕ್ ಬಿಸಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.