ಬೆಂಗಳೂರು: ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ 3ನೇ ಸಭೆಯು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ’ವೆಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

‘ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳು ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ನರೇಂದ್ರ ಮೋದಿಯವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ’ ಎಂದು ಕಿಡಿಕಾರಿದ್ದಾರೆ.


Tumakuru: ವೈದ್ಯರ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ!


‘ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಮೋದಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ ಕೂಡ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು. ಜಿ-20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ’ ಎಂದು ಸಿದ್ದರಾಮಯ್ಯ ಟ್ವೀವಟ್ ಮಾಡಿದ್ದಾರೆ.


ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಹೋಟೆಲ್‍ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.