ಬೆಂಗಳೂರು: ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿಗೆ ಸ್ವಾಗತವೆಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಲವಾರು ಪ್ರಶ್ನೆಗಳನ್ನು ಕೇಳಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ ಅಂತಾ ಸಿದ್ದರಾಮಯ್ಯ ಟೀಕಿಸಿದ್ದಾರೆ.
ʼಪ್ರಧಾನಿ ಮೋದಿಯವರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ? ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿʼ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ @narendramodi ಅವರಿಗೆ ಸ್ವಾಗತ.
ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು…— Siddaramaiah (@siddaramaiah) April 28, 2024
ಇದನ್ನೂ ಓದಿ: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ: ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ SIT ರಚನೆ
ಪ್ರಧಾನಿ @narendramodi ಅವರೇ,
‘‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ?
ಲೋಕಸಭಾ ಚುನಾವಣೆಗಾಗಿ… pic.twitter.com/Ue83nV5w5y— Siddaramaiah (@siddaramaiah) April 28, 2024
ʼಪ್ರಧಾನಿ ಮೋದಿಯವರೇ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?ʼ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ @narendramodi ಅವರೇ,
ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ,… pic.twitter.com/j5sIxaAynm— Siddaramaiah (@siddaramaiah) April 28, 2024
ʼಪ್ರಧಾನಿ ಮೋದಿಯವರೇ, ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಎಚ್.ಡಿ.ದೇವೇಗೌಡರು. ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?ʼ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪ್ರಧಾನಿ @narendramodi ಅವರೇ,
ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು… pic.twitter.com/56tptb5b3F— Siddaramaiah (@siddaramaiah) April 28, 2024
ಇದನ್ನೂ ಓದಿ: ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ
ಪ್ರಧಾನಿ @narendramodi ಅವರೇ,
ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.ನಿಮ್ಮ 10 ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು… pic.twitter.com/YUJxzxJmSt
— Siddaramaiah (@siddaramaiah) April 28, 2024
ʼಪ್ರಧಾನಿ ಮೋದಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ 10 ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?ʼ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.