ಬೆಂಗಳೂರು: ಈಗ ಪ್ರಧಾನಿ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ. 2029ರಲ್ಲೂ ಜಾರಿ ಆಗುವುದಿಲ್ಲ, 2034ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟವು ಭಾನುವಾರ ಬೆಂಗಳೂರಿನ ಗಾಂಧಿಭವನದಲ್ಲಿ ಜಂಟಿಯಾಗಿ ಹಮ್ಮಿಕೊಂಡಿದ್ದ "ಮಹಿಳಾ ಮೀಸಲಾತಿ" ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.


COMMERCIAL BREAK
SCROLL TO CONTINUE READING

ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ  ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ. ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಕಾಂಗ್ರೆಸ್ ವಿರುದ್ಧ ಬಿಜೆಪಿ ಕಲಿಗಳ ರೋಶಾಗ್ನಿ


‘ಪ್ರಧಾನಿ ಮೋದಿಯವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.


ಸಿಲಿಕಾನ್ ಸಿಟಿಯಲ್ಲಿ ಕಾವೇರಿ ಕದನ


‘ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ.  ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.