ಪಹಲ್ಗಾಮ್‌ ಉಗ್ರರರ ದಾಳಿ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ : ಸಿಎಂ ಸಿದ್ದರಾಮಯ್ಯ

Pahalgam Terror Attack : ಪಹಲ್ಗಾಮ್ ದಾಳಿ ಪೂರ್ವಯೋಜಿತ ಸಂಚು. ಅಷ್ಟೇ ಅಲ್ಲ, ಈ ಘಟನೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಪುಲ್ವಾಮಾದಲ್ಲಿ ನಡೆ ಭಯೋತ್ಪಾದಕ ದಾಳಿಯಲ್ಲಿಯೂ ಸಹ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Written by - Krishna N K | Last Updated : Apr 23, 2025, 02:55 PM IST
    • ಪಹಲ್ಗಾಮ್ ದಾಳಿ ಪೂರ್ವಯೋಜಿತ ಸಂಚು.
    • ಈ ಘಟನೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ
    • ಭಯೋತ್ಪಾದಕ ದಾಳಿ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ
ಪಹಲ್ಗಾಮ್‌ ಉಗ್ರರರ ದಾಳಿ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Add Zee News as a Preferred Source

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಖಂಡನೀಯ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಇದನ್ನೂ ಓದಿ: ಉಗ್ರರ ಗುಂಡಿಗೆ ಬಲಿಯಾದ ಸ್ಟಾರ್ ನಟಿಯ ತಂದೆ... ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ ಪಾಪಿಗಳು, ನಿಜಕ್

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು : ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News