ಬೆಂಗಳೂರು: ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಈ ರೀತಿ ಪ್ರಶ್ನಿಸಿದರು. 


COMMERCIAL BREAK
SCROLL TO CONTINUE READING

ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ ಅವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು. ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು. 


ಪ್ರಭಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು. 


ಇದನ್ನೂ ಓದಿ- ಪರಿಷತ್ ನಲ್ಲಿ ಬಿಜೆಪಿಯನ್ನು ಕುಟುಕಿದ ಸಿಎಂ ಸಿದ್ದರಾಮಯ್ಯ


ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತನ್ನು ಮುಂದುವರೆಸಿದರು.


ಈ ವೇಳೆ ಮುಖ್ಯಮಂತ್ರಿಗಳು, " ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು JD "S" ಅಲ್ಲ ಈಗ JD "C" ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು. 


ಇದನ್ನೂ ಓದಿ- ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ


ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರವಿಕುಮಾರ್ ಅವರೇ RSS ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ  ಎಂದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.