CM unemployed good news: ರಾಜ್ಯದ ಯುವ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ.. ರಾಜ್ಯದಲ್ಲಿ 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ..
ಯುವ ಜನತೆ ನಿರುದ್ಯೋಗದಿಂದ ಖಾಯಂ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಯಾವುದಾರೊಂದು ಉದ್ಯೋಗ ಸಿಕ್ಕಿದ್ದರೆ ಸಾಕಪ್ಪ ಅನುಷ್ಟರಮಟ್ಟಿಗೆ ತಲುಪಿದೆ..ಹೀಗಿರುವಾಗ ಇಂದು ಸಿದ್ದರಾಮಯ್ಯ ಮಹತ್ವದ ತೀರ್ಮಾನ ಒಂದು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ 24,300 ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟು ದಿನ ಕೆಲಸವಿಲ್ಲವೆಂದು ಕಂಗೆಟ್ಟಿದ್ದ ಯುವ ಜನತೆಗೆ ಸಿದ್ದರಾಮಯ್ಯ ಅವರ ಮಹತ್ವದ ತೀರ್ಮಾನವನ್ನ ಕೇಳಿ ಮರುಭೂಮಿಯಲ್ಲಿ ನೀರು ಸಿಕ್ಕಾಂತಾಗಿದೆ..
ಬಿಜೆಪಿ ಉಚ್ಚಾಟಿತ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್‌ರಾಜ್ಯದಲ್ಲಿ ಸರ್ಕಾರಿ ಮತ್ತ ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನಿಸಿದರು..ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಸಿದ್ದರಾಮಯ್ಯ ಉತ್ತರಿಸಿ ಲಿಖಿತ ರೂಪದಲ್ಲೇ ಉತ್ತರಿಸಿದ್ದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 24,300 ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಮಾಡಿಕೊಳ್ಳಲು ರಾಜ್ಯದ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಹಣಕಾಸು ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ನಿಯಮದ ಅನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಮನೆಗೆ ವಿಡಿಯೋ ಕಾಲ್ ಮಾಡಿ ಚೆನ್ನಾಗಿದ್ದೇನೆ, ನಾಳೆ ಆಸ್ಪತ್ರೆಗೆ ಹೋಗ್ತೀನಿ ಎಂದಿದ್ದ ಯೋಧ ಹುತಾತ್ಮ









