ಸಂಕಷ್ಟ ಸೂತ್ರ ಸಿದ್ಧವಾಗದಿರುವುದರಿಂದ ಕಾವೇರಿ ನೀರು ಹಂಚಿಕೆ ಕ್ಲಿಷ್ಟಕರ: ಸಿಎಂ ಸಿದ್ದರಾಮಯ್ಯ
Cauvery Water Sharing Dispute: ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲವೆಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆದ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯನವರು ಮಾತನಾಡಿದರು.
‘ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ’ವೆಂದು ಅವರು ಹೇಳಿದ್ದಾರೆ.
"ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು"
ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಿಲ್ಲ; ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿಯಿದೆ- ಸಿಎಂ ಸಿದ್ದರಾಮಯ್ಯ
ನೀರಾವರಿ ಸಚಿವರಿಗೆ 2 ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಮೋದಿಯವರ ಸಮಯ ಕೇಳಿದ್ದೇವೆ. ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಅವರು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.