CM Siddaramaiah Visits Mantralaya: ನಾಳೆ ಮಂತ್ರಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
MUDA Case: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
CM Siddaramaiah Visits Mantralaya: ಮಂತ್ರಾಲಯದ ಶ್ರೀಮಠದಲ್ಲಿ ಆಗಸ್ಟ್ 18ರಿಂದ 24ರವರೆಗೆ ರಾಯರ 353ನೇ ಆರಾಧನಾ ಮಹೋತ್ಸವ ಜರಗಲಿದೆ. ಶ್ರೀಮಠಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ನಡುವೆ ನಾಳೆ ಮಂತ್ರಾಲಯಕ್ಕೆ ಸಿಎಂ ಸಿದ್ದರಾಮಯ್ಯನವರು ಭೇಟಿ ನೀಡಲಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಟೆನ್ಶನ್ ನಡುವೆ ರಾಯರ ದರ್ಶನಕ್ಕೆ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ.
ಆಗಸ್ಟ್ 18ರಿಂದ 24ರವರೆಗೆ ನಡೆಯಲಿರುವ ಸಪ್ತರಾತ್ರೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗಿಯಾಗಲಿದ್ದಾರೆ. ಮಂತ್ರಾಲಯ ಭೇಟಿ ಬಳಿಕ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಮುಡಾ ಹಗರಣದ ಟೆನ್ಶನ್‌ನಲ್ಲಿರುವ ಸಿಎಂ ಸಿದ್ದರಾಮಯ್ಯನವರು ಪ್ರವಾಸಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ತಮಗೆ ಎದುರಾಗಿರುವ ಸಂಕಷ್ಟಗಳಿಂದ ಪಾರಾಗಲು ಮಂತ್ರಾಲಯದ ರಾಯರಿಗೆ ಮೊರೆ ಹೋಗಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್!
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕರಣ (MUDA Case)ದಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಮನವಿ ಮಾಡಿದ್ದರು. ಸಿದ್ದರಾಮಯ್ಯ ವಿರುದ್ಧದ ದೂರಿನಲ್ಲಿ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳಿವೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಕುರಿತು ತಟಸ್ಥ, ವಸ್ತುನಿಷ್ಠ ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ ಅಂತಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶದಲ್ಲಿ ತಿಳಿಸಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನಿಡಿರುವ ಹಿನ್ನೆಲೆ ಪ್ರತಿಪಕ್ಷಗಳು ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಒತ್ತಾಯಿಸಿವೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ. ರಾಜ್ಯಪಾಲರ ಅನುಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಈ ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಹಾಗೂ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು: ಎಚ್.ಸಿ.ಮಹದೇವಪ್ಪ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ