ಜೆಡಿಎಸ್ ಪಕ್ಷದಿಂದ ‘ರೈತ ಸಾಂತ್ವನ ಯಾತ್ರೆ’: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

JDS Karnataka Drought Study: ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Nov 5, 2023, 07:04 PM IST
  • ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ಜೆಡಿಎಸ್ ಕೈಗೊಂಡಿರುವ ‘ರೈತ ಸಾಂತ್ವನ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಸ್ವಾಗತ
  • ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸವಾಗಿದೆ ಎಂದ ಸಿದ್ದರಾಮಯ್ಯ
  • ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ
ಜೆಡಿಎಸ್ ಪಕ್ಷದಿಂದ ‘ರೈತ ಸಾಂತ್ವನ ಯಾತ್ರೆ’: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?  title=
‘ರೈತ ಸಾಂತ್ವನ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಫಿಕ್ಸ್

‘ಹೊಸ ಬೆಳವಣಿಗೆಯಲ್ಲಿ ಕುಮಾರಸ್ವಾಮಿಯವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ಮೋದಿಯವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು 33,710 ಕೋಟಿ ರೂ. ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಬಿಜೆಪಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ’ವೆಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಟ್ಟಕ್ಕಾಗಿ ನಾನು ಪ್ರಯತ್ನ ಮಾಡಿದ್ದೇ, ಆದ್ರೆ ಆಗಲಿಲ್ಲ : ಶ್ರೀರಾಮುಲು

‘ಬರಪರಿಹಾರಕ್ಕಾಗಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧವಿದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಎಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News