ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ’ ಎಂದು ಹೇಳಿದ್ದಾರೆ.


ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಫಿಕ್ಸ್


‘ಹೊಸ ಬೆಳವಣಿಗೆಯಲ್ಲಿ ಕುಮಾರಸ್ವಾಮಿಯವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ಮೋದಿಯವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಪಟ್ಟಕ್ಕಾಗಿ ನಾನು ಪ್ರಯತ್ನ ಮಾಡಿದ್ದೇ, ಆದ್ರೆ ಆಗಲಿಲ್ಲ : ಶ್ರೀರಾಮುಲು


ಎಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು’ ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.