ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ವಾಪಸ್‌ ನೀಡಲು ಸಿಎಂ ಪತ್ನಿ ಮುಂದಾಗಿದ್ದಾರೆ. ಸಿದ್ದರಾಮಯ್ಯನವರಿಗೆ ಮಂಜೂರಾಗಿರುವ 14 ನಿವೇಶನಗಳನ್ನು ವಾಪಸ್‌ ಪಡಯುವಂತೆ ಮುಡಾ ಆಯುಕ್ತರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ ಬರೆದಿದ್ದಾರೆ. ಪಾರ್ವತಿ ಅವರು ತಮ್ಮ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಬೇರೆ ಸ್ಥಳದಲ್ಲಿ ನೀಡಲಾದ 14 ನಿವೇಶನಗಳನ್ನು ವಾಪಸ್‌ ನೀಡಲು ಬಯಸುವುದಾಗಿ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಅಲ್ಲದೆ ನಿವೇಶನಗಳ ಸ್ವಾಧೀನವನ್ನು ಮೈಸೂರು ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ದಯವಿಟ್ಟು ಮುಡಾ ಆದಷ್ಟು ಬೇಗ ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 


ಇದನ್ನೂ ಓದಿ: Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!


ಮುಡಾದಿಂದ ಪಾರ್ವತಿ ಅವರಿಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶಿಸಿದ್ದರು. ಇದನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದಾದ ಬಳಿಕ ಬೆಂಗಳೂರಿನ ವಿಶೇಷ ನ್ಯಾಯಾಲಯ ಈ ಕುರಿತು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ಹೆಸರನ್ನು ಲೋಕಾಯುಕ್ತರು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ. ಇದೀಗ ED ಕೂಡ ಈ ವಿಷಯದಲ್ಲಿ ಪ್ರವೇಶಿಸಿದೆ. ಸಿದ್ದರಾಮಯ್ಯ ವಿರುದ್ಧ ED ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವಾರ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಅರ್ಜಿ ತಿರಸ್ಕೃತಗೊಂಡ ನಂತರ ಸಿಎಂ ವಿರುದ್ಧ ಪ್ರಕರಣ ದಾಖಲಿಸಬಹುದು. ಆದರೆ, ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ನ ಹಾದಿ ಇನ್ನೂ ತೆರೆದಿದೆ.


ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದರಿಂದ ಈ ವಿಚಾರದಲ್ಲಿ ರಾಜಕೀಯವಾಗಿ ಹಲವಾರು ಬೆಳವಣಿಗೆಗಳು ನಡೆಯುತ್ತಿದೆ. ಬಿಜೆಪಿ ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿದ್ದರೆ, ಕಾಂಗ್ರೆಸ್ ಅವರನ್ನು ಸಮರ್ಥಿಸಿಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿದ ಬಿಜೆಪಿ, ಸಿಎಂ ಅಕ್ರಮ ಎಸಗಿದ್ದು ಹೀಗಾಗಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತ್ತು. ಮುಡಾ ಪ್ರಕರಣವನ್ನು ಬಿಜೆಪಿ ಹಗರಣ ಎಂದು ಬಣ್ಣಿಸಿದೆ. 


ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.