Siddaramaiah vs HD Kumaraswamy: ಸಿಎಂ ಸಿದ್ದರಾಮಯ್ಯರ ಚಡ್ಡಿ ಫುಲ್ ಕಪ್ಪಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ʼನನ್ನ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲʼ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರು ತಮ್ಮ ಚಡ್ಡಿಯನ್ನೆಲ್ಲಾ ಕಪ್ಪು ಮಾಡಿಕೊಂಡಿದ್ದಾರೆʼ ಅಂತಾ ಎಚ್‌ಡಿಕೆ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ನಾವು ಕಾನೂನು ಬಾಹಿರವಾಗಿ ಸೈಟ್​ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಅಂತಾ ಅವರು ಹೇಳಿದ್ದಾರೆ. ಆದರೆ ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ.  


ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಂದ ʼಬೆಂಗಳೂರು ಚಲೋʼ!


ಸಿಎಂ ಸಿದ್ದರಾಮಯ್ಯರಿಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್​ ವಾಪಸ್​ ಕೊಡಲು ಸಿದ್ಧ ಅಂತಾ ಹೇಳಿದ್ದಾರಂತೆ. ಸೈಟ್ ವಾಪಸ್​ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ? ಅಂತಾ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 


ನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ. ನೀವು ಒಂದು ವರ್ಗದ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಆಗುವುದಿಲ್ಲ. ಆರೂವರೆ ಕೋಟಿ ಜನರಿಗೆ ರಕ್ಷಣೆ ನೀಡಬೇಕಾಗಿರುವುದು ನಿಮ್ಮ ಕರ್ತವ್ಯ. ಸಿದ್ದರಾಮಯ್ಯನವರು ತಮ್ಮ ಚಡ್ಡಿಯನ್ನೆಲ್ಲಾ ಕಪ್ಪುಮಾಡಿಕೊಂಡುಬಿಟ್ಟಿದ್ದಾರೆ, ಕಪ್ಪು ಚುಕ್ಕೆ ಮುಖದಲ್ಲಿ ಕಾಣದಿದ್ದರೆ ಏನು ಮಾಡಲು ಆಗುತ್ತದೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ: ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ವಿಳಂಬ ಏಕೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.