ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡೀ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಇದೇ ಭಾನುವಾರದಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಇದೀಗ ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಸ್ವತಃ ಬಸ್‌ನ ಕಂಡಕ್ಟರ್ ಆಗಲಿದ್ದಾರೆ. 


COMMERCIAL BREAK
SCROLL TO CONTINUE READING

ಭಾನುವಾರ ಕಂಡಕ್ಟರ್ ಆಗ್ತಿದ್ದಾರೆ ಸಿಎಂ ಸಿದ್ದರಾಮಯ್ಯ : 
ಹೌದು, ಕುತೂಹಲಕ್ಕೆ ಕಾರಣವಾಗಿರೋ ಮತ್ತು ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವ ಹಾಗೆ ಮಾಡಿರೋ ರಾಜ್ಯದ ಪಂಚ ಗ್ಯಾರೆಂಟಿಗಳು ಒಂದೊಂದಾಗಿ ಜಾರಿಯಾಗ್ತಿವೆ. ಮೊದಲ ಯೋಜನೆ ಆಗಿರೋ ಶಕ್ತಿ ಯೋಜನೆ ನಾಳೆಯಿಂದ ಜಾರಿಯಾಗಲಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಖುದ್ದು ಸಿಎಂ ಸಿದ್ದರಾಮಯ್ಯನವರೇ ಬಸ್ ಹತ್ತುವ ಮೂಲಕ  ಈ ಯೋಜನಗೆ ಚಾಲನೆ ನೀಡಲಿದ್ದಾರೆ. ಸ್ವತಃ ಕಂಡಕ್ಟರ್ ಆಗುವ ಮೂಲಕ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಿದ್ದಾರೆ.


ಇದನ್ನೂ ಓದಿ : ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳ ಮೇಲೆ ದಾಳಿ, 11 ಟನ್‌ ನಿಷೇಧಿತ ಪ್ಲಾಸ್ಟಿಕ್ ವಶ


ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.


ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್‌ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ. ರೂಟ್ ನಂ.43 ಬಸ್‌ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಅಂದೇ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ. 


ಇದನ್ನೂ ಓದಿ : ವಿದ್ಯಾರ್ಥಿನಿಗೆ ದೋಷ ಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ದಂಡ 


ಈ ವೇಳೆ ಶಕ್ತಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್‌ ಕಾರ್ಡ್‌ ಕೂಡ ಬಿಡುಗಡೆಯಾಗಲಿದೆ. ಸಿದ್ದರಾಮಯ್ಯ ಅವರಿಗೆ ಈ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಸಾಥ್‌ ಕೊಡಲಿದ್ದಾರೆ. 


ಒಟ್ಟಾರೆ, ಇಡೀ ದೇಶದ ಗಮನ ಸೆಳೆದಿರುವ ಪಂಚ ಗ್ಯಾರಂಟಿ ಯೋಜನೆಗಳ ಉದ್ಘಾಟನೆ ಕೂಡ ವಿಭಿನ್ನವಾಗಿರಬೇಕು ಎಂಬ ಆಲೋಚನೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ. ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳ ಉದ್ಘಾಟನೆ ವಿಶೇಷವಾಗಿರಲಿದೆ ಎನ್ನಲಾಗಿದೆ.  ಕೇವಲ ರಾಜಧಾನಿಯಲ್ಲಿ ಮಾತ್ರ ಕಾರ್ಯಕ್ರಮಗಳ ಉದ್ಘಾಟನೆಯಾಗದೇ ಐದು ವಿಭಾಗೀಯ ಕೇಂದ್ರಗಳಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.