ಬೆಂಗಳೂರು : ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ"ಗೆ ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ. ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ " ರೈತ ಶಕ್ತಿ "  ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ.


COMMERCIAL BREAK
SCROLL TO CONTINUE READING

ರೈತ ಶಕ್ತಿ ಯೋಜನೆಗೆ ಚಾಲನೆ :
ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ  ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ  2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ  " ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.  ಕೃಷಿ ಉತ್ಪಾದಕತೆಯನ್ನು ಹೆಚ್ಚಿ ಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯದಲ್ಲಿಯೇ  ಮೊದಲ ಬಾರಿಗೆ ಈ "ರೈತ ಶಕ್ತಿ ಯೋಜನೆ" ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.


ಇದನ್ನೂ ಓದಿ : ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು-ಕಾಂಗ್ರೆಸ್ ಘೋಷಣೆ


45 ಲಕ್ಷಕ್ಕೂ ಹೆಚ್ಚಿನ ರೈತ ಕುಟುಂಬಗಳಿಗೆ  ಹಣ ವರ್ಗಾವಣೆ : 
ಪ್ರತಿ ಎಕರೆಗೆ 250 ರೂ. ಯಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ " ರೈತ ಶಕ್ತಿ "  ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು ,  ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. 


ದತ್ತಾಂಶಗಳ ಆಧಾರದ ಮೇಲೆ  ಹಣ ವರ್ಗಾವಣೆ : 
FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡುವುದು.  FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು. 


ಇದನ್ನೂ ಓದಿ :  ಇದೇ ಕೊನೆ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ?: ಸಿದ್ದುಗೆ ಸುನೀಲ್ ಕುಮಾರ್ ಪ್ರಶ್ನೆ


ಅರ್ಹ ರೈತರಿಗೆ ಲಾಭ : 
FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ ಐದು ಎಕರೆಗೆ 1250 ರೂಪಾಯಿ ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು . ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.