ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಯಡಿಯೂರಪ್ಪಗೆ ಅಧಿಕೃತ ಆಹ್ವಾನ
ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂದೆಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಖಿ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದಸರಾ ಸ್ವಾಗತ ಸಮಿತಿ ಶನಿವಾರ ಅಧಿಕೃತ ಆಹ್ವಾನ ನೀಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಕ್ಕೆ ಭೇಟಿ ನೀಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್ ಮೊದಲಾದವರಿದ್ದ ಮೈಸೂರು ದಸರಾ ಸಮಿತಿ ನಿಯೋಗ ಸಿಎಂ ಯಡಿಯೂರಪ್ಪ ಅವರಿಗೆ ಮೈಸೂರು ಪೇಟ, ಶಾಲು ಹೊದಿಸಿ, ಹೂಗುಚ್ಛ ನೀಡಿ ಅಧಿಕೃತ ಆಹ್ವಾನಿಸಿತು.
ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂದೆಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.