BS Yediyurappa: ಆಸ್ಪತ್ರೆಗೆ ದಾಖಾಲಾಗಿರುವ ಸಿಎಂ ಬಿಎಸ್ವೈ ಆರೋಗ್ಯದಲ್ಲಿ ಚೇತರಿಕೆ!
ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಕರೋನವೈರಸ್ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
"ಕೊವಿಡ್ ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಯಲ್ಲಿ ದಾಖಲಾದ ಸಿಎಂ(BS Yediyurappa) ತಜ್ಞ ವೈದ್ಯರ ತಂಡದಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಚೇತರಿಸಿಕೊಳ್ಳುತ್ತಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ ಭಾನುವಾರ ಟ್ವೀಟ್ ಮಾಡಿದೆ.
ಇದನ್ನೂ ಓದಿ : Kota Srinivas Poojary: ಧಾರ್ಮಿಕ ಕಾರ್ಯಕ್ರಮಗಳ ಮೇಲಿನ ಕ್ರಮಗಳನ್ನು ಸಡಿಲಿಸುವಂತೆ ಸಚಿವರಿಂದ ಸಿಎಂಗೆ ಒತ್ತಾಯ!
ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ ತಮ್ಮ ನೆಚ್ಚಿನ ಪುಸ್ತಕ(Books)ಗಳನ್ನು ಓದುವುದರಲ್ಲಿ ಸಮಯ ಕಳೆಯುತ್ತಿದ್ದಾರೆ ಮತ್ತು ಅವರಿಗೆ ಅಗತ್ಯವಾದ ನಿರ್ದೇಶನಗಳನ್ನು ನೀಡಲು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.
"ಸರ್ಕಾರ ರಸಗೊಬ್ಬರ ಕಂಪೆನಿಗಳ ಜೊತೆ ಷಾಮೀಲಾಗಿ ರೈತರನ್ನು ಸುಲಿಗೆ ಮಾಡಲು ಹೊರಟಂತಿದೆ"
ಮುಖ್ಯಮಂತ್ರಿಗೆ ಶುಕ್ರವಾರ ಜ್ವರ ಕಾಣಿಸಿಕೊಂಡಿತ್ತು ಆಗ ಅವರನ್ನು ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್(Corona positive) ವರದಿಯಾಗಿತ್ತು. ಆದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ : NWKRTC ಚಾಲಕನ ಸಾವು: ಮುಷ್ಕರ ನಿರತ ನೌಕರರ ವಿರುದ್ಧ ಸಾರಿಗೆ ಸಚಿವರು ಗರಂ!
ಸಿಎಂ ಬಿಎಸ್‌ವೈಗೆ ಕೊರೋನಾ ಎರಡನೇ ಬಾರಿ ತಗುಲಿದೆ. ಕೊವಿಡ್(COVID-19) ಮೊದಲು ಡೋಸ್ ಕೂಡ ಸಿಎಂ ತೆಗೆದುಕೊಂಡಿದ್ದರು. ಅದರರು ಎರಡನೇ ಬಹರಿ ಕೊರೋನಾ ತಗುಲಿರುವುದು ಆತಂಕಕ್ಕೆ ಈಡಾಗಿದೆ.
ಇದನ್ನೂ ಓದಿ : COVID-19: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್-19 ಮಾರ್ಗಸೂಚಿ: ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ, ವಿವಾಹ ಸಮಾರಂಭಗಳಿಗೆ ಮಿತಿ!
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಪ್ರಕರಣ(Coronavirus Cases)ಗಳನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮ ಕೈಗೊಳ್ಳಲು ಸಿಎಂ ಇಂದು ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ, ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ ಈಗ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.