ಬೆಂಗಳೂರು: ತಮ್ಮ ಮೇಲೆ ಈಗ ಎಫ್ಐಆರ್ ದಾಖಲಿಸಿರುವುದರ ವಿರುದ್ಧ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ವಿವರಣೆ ನೀಡಿದ ಅವರು, ಕಳೆದ ಫೆಬ್ರುವರಿಯಲ್ಲಿ ನೀಡಿದ್ದ ಹೇಳಿಕೆ ಸಂಬಂಧವಾಗಿ ನಾನು ಈಗಾಗಲೇ ಸದನದಲ್ಲೇ ಸ್ಪಷ್ಟನೆ ನೀಡಿದ್ದೇನೆ. ಈ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದೂ ಹೇಳಿದ್ದೇನೆ. ಇಷ್ಟಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ 4 ತಿಂಗಳ ಹಿಂದಿನ ಹೇಳಿಕೆಯನ್ನು ನೆಪವಾಗಿಸಿಕೊಂಡು ಎಫ್ಐಆರ್ ದಾಖಲಾಗುವಂತೆ ಮಾಡಲಾಗಿದೆ ಎಂದರು.
ನನಗೇನೂ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ದ್ವೇಷವಿಲ್ಲ. ಅವರ ಬಗ್ಗೆ ಗೌರವ ಇದೆ. ಆದರೆ ಸೈದ್ಧಾಂತಿಕವಾಗಿ ನಮ್ಮ ಹಾಗೂ ಅವರ ಪಕ್ಷಗಳ ನಡುವೆ ವ್ಯತ್ಯಾಸಗಳಿವೆ. ಈ ಹಿನ್ನೆಲೆ ನಾನು ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಹೇಳಿಕೆ ನೀಡಿದ್ದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ನನ್ನ ಉದ್ದೇಶ ಅದಾಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: 20 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳನ್ನ ತಡೆ ಹಿಡಿಯುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದ ಜನರು ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. 2ಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥ್ ನಾರಾಯಣ ಟೀಕಿಸಿದ್ದಾರೆ.
ಇಷ್ಟಕ್ಕೂ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ನನ್ನ ಹೇಳಿಕೆ ವಿರುದ್ಧ ದೂರು ಏಕೆ ದಾಖಲಿಸಲಿಲ್ಲ ಎಂದು ಡಿಸಿಎಂ ಧಮ್ಕಿ ಹಾಕಿದ ಮೇಲೆ ದೂರು ದಾಖಲಿಸಿರುವುದು ಕೂಡ ಇದೆಲ್ಲವೂ ರಾಜಕೀಯ ಪ್ರೇರಿತ ಎನ್ನುವುದನ್ನು ತೋರಿಸುತ್ತದೆ ಎಂದರು.
ಇದಲ್ಲದೆ ಅಧಿಕಾರಕ್ಕೆ ಬಂದು ಇನ್ನೂ 1 ವಾರ ಆಗಿಲ್ಲ, ಆಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಇದು ಕೂಡ ಸರ್ಕಾರದ ಆದ್ಯತೆ ಏನು ಎನ್ನುವುದನ್ನು ತೋರಿಸುತ್ತದೆ. ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುವುದರ ಕಡೆಗೆ ಸರ್ಕಾರ ಗಮನ ಕೊಡಲಿ. ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನ್ ಬೇಕಾದರೂ ಆಗಬಹುದು: ಎಚ್ಡಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.