ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲಿ ರಾಜ್ಯಕ್ಕೆ ಒಪ್ಪಂದದಂತೆ ಬಾಕಿ ಇರುವ 6 ಲಕ್ಷ ಟನ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಸಚಿವರಾಗಿರುವ ಪಿಯೂಷ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ. ಈ ಸ್ಥಿತಿಗೆ ಕಾರಣ, ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್(WLC) ರವರು ಕಲ್ಲಿದ್ದಲು ಪೂರೈಕೆ ಒಪ್ಪಂದದ ಪ್ರಕಾರ ನೀಡ ಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6 ಲಕ್ಷ ಟನ್ ಗಳಷ್ಟು ಕಲ್ಲಿದ್ದಲನ್ನು ಈವರೆಗೆ ಪೂರೈಕೆ ಮಾಡದಿರುವುದು ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.


ಈ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ನಾನು ಗೌರವಾನ್ವಿತ ಕೇಂದ್ರ ಕಲ್ಲಿದ್ದಲು ಸಚಿವರಾದ ಶ್ರೀ ಪಿಯೂಷ್ ಗೋಯಲ್ ರವರನ್ನು ಪತ್ರ ಮುಖೇನ ವಿನಂತಿಸಿಕೊಂಡಿದ್ದೇನೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಮೆ:WCL ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಹಕರಿಸುವಂತೆ ಕೋರಿದ್ದಾರೆ.



ರಾಜ್ಯದ ರಾಯಚೂರು ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹ ಖಾಲಿಯಾಗಿದ್ದು ಈಗಾಗಲೇ ನಾಲ್ಕು ಘಟಕಗಳು ಉತ್ಪಾದನೆ ಸ್ಥಗಿತಗೊಳಿಸಿವೆ.