ಕಾಲೇಜ್ನಿಂದ ಡಿಬಾರ್ ಮಾಡಿದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಳೆಂದು ಡಿಬಾರ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರು: ಕಾಲೇಜ್ನಿಂದ ಡಿಬಾರ್ ಮಾಡಿದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಜೀವನ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೊಮ್ಮಲೂರು ಬ್ರಿಡ್ಜ್ ಬಳಿ ಮಹಿಳಾ ಪಿಜಿಯಲ್ಲಿ ವಾಸಿಸುತ್ತಿದ್ದ ಭವ್ಯ(21) ಎಂಬ ವಿದ್ಯಾರ್ಥಿನಿ ಮಹಿಳಾ ಪಿಜಿ ಕಟ್ಟಡದ ಐದನೇ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಇದನ್ನೂ ಓದಿ- ಹಾಸನ: ರಾತ್ರಿ ಕಳೆದು ಬೆಳಗಾಗೊವಷ್ಟರಲ್ಲಿ ಪ್ರಾಣ ಬಿಟ್ಟ ಇಡೀ ಕುಟುಂಬ!
ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ (Private College) ಮೊದಲ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಳೆಂದು ಡಿಬಾರ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಇದರಿಂದ ಮನನೊಂದ ಭವ್ಯ ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ ನೋವು ಹಂಚಿಕೊಂಡಿದ್ದರು. ಈ ವೇಳೆ ಕಾಲೇಜಿನಿಂದ ನನ್ನನ್ನು ಡಿಬಾರ್ ಮಾಡಿದ್ದಾರೆ, ನಾನು ಬದುಕುವುದಿಲ್ಲಾ ಎಂದು ಸಹೋದರಿಯೊಂದಿಗೆ ನೋವು ತೋಡಿಕೊಂಡಿದ್ದರು. ಇದರಿಂದ ಗಾಬರಿಗೊಂಡ ಸಹೋದರಿ ಈ ಬಗ್ಗೆ ಕೂಡಲೇ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ.
ಇದನ್ನೂ ಓದಿ- Suicide: ಗಂಡ ಹೋಟೆಲ್ ಊಟ ಕೊಡಿಸಲಿಲ್ಲ ಅಂತಾ ಪತ್ನಿ ಸೂಸೈಡ್..?
ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ಮುಳಬಾಗಿಲಿನಿಂದ ಬೆಂಗಳೂರಿನತ್ತ ಬರುತ್ತಿದ್ದರು.ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.