ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಲೋಕಾಯುಕ್ತ ಎಡಿಜಿಪಿ ವಿರುದ್ಧ ಗಿರೀಶ್ ಲಿಂಗಣ್ಣ ಬೇಸರ
HD Kumaraswamy vs ADGP Chandrashekar: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ʼಕಳ್ಳನ ಮನಸ್ಸು ಹುಳ್ಳಳ್ಳಗೆʼ ಎಂದು ಟೀಕಿಸಿದೆ.
𝗚𝗶𝗿𝗶𝘀𝗵 𝗟𝗶𝗻𝗴𝗮𝗻𝗻𝗮 Slams IPS officer M. Chandrasekhar: ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಲೇಖಕ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಎಡಿಜಿಪಿ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಎಡಿಜಿಪಿ ಎಸ್ಐಟಿ ಅವರು ನೀಡಿರುವ ಹೇಳಿಕೆಯಲ್ಲಿ ಕೇಂದ್ರ ಸಚಿವರನ್ನು ಉಲ್ಲೇಖಿಸಿ ಮಾತನಾಡುವಾಗ ಬಳಸಿರುವ ಭಾಷೆ ಮತ್ತು ಅವರನ್ನು ಹಂದಿಯ ಜೊತೆ ಹೋಲಿಕೆ ಮಾಡುವಂತಹ ರೂಪಕವನ್ನು ಬಳಸಿರುವುದು ಅವರ ವೃತ್ತಿಪರತೆ ಮತ್ತು ಸಾರ್ವಜನಿಕ ಸ್ಥಾನದಲ್ಲಿ ಇರುವವರ ಕುರಿತು ಅವರು ಹೊಂದಿರುವ ಗೌರವಗಳ ಕುರಿತು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಕಾನೂನಿನ ಪ್ರಕ್ರಿಯೆಗಳು ಏನೇ ಇದ್ದರೂ, ಓರ್ವ ಸಚಿವರ ಕುರಿತು ಬಳಸುವ ಭಾಷೆ ಇದಲ್ಲ ಅಂತಾ ಗಿರೀಶ್ ಲಿಂಗಣ್ಣ ಹೇಳಿದ್ದಾರೆ.
ಇದನ್ನೂ ಓದಿ: ಸಾವಳಗಿಯಲ್ಲಿ ಸಚಿವರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ
ಪ್ರಸ್ತುತ ಪೊಲೀಸ್ ಅಧಿಕಾರಿಗೆ ಓರ್ವ ವ್ಯಕ್ತಿ ಅಥವಾ ಅವರಿರುವ ಸ್ಥಾನವನ್ನು ನೇರವಾಗಿ ಅವಮಾನಿಸುವ ಉದ್ದೇಶ ಇಲ್ಲದಿರಬಹುದು. ಆದರೆ ಅವರು ಬಳಸಿರುವ ಭಾಷೆ ಸಾರ್ವಜನಿಕ ಅಭಿಪ್ರಾಯವನ್ನು ಋಣಾತ್ಮಕವಾಗಿಸಬಹುದು. ಅವರು ಅಧಿಕೃತ ರೀತಿಯಲ್ಲಿ ನಡೆಸಬೇಕಾಗಿರುವ ಸಂವಹನದ ಮಟ್ಟವನ್ನು ಕೆಳಗಿಳಿಸಿದಂತೆ ಕಾಣುತ್ತಿದೆ. ಕಾನೂನು ತನ್ನ ಕ್ರಮವನ್ನು ಸಮರ್ಪಕವಾಗಿ ತೆಗೆದುಕೊಳ್ಳುವಂತೆ ಮಾಡುವುದು ಖಂಡಿತಾ ಸರಿ. ಆದರೆ ಆರೋಪಗಳ ಕುರಿತು ಮಾತನಾಡುವ ಸಂದರ್ಭದಲ್ಲಿ ಜವಾಬ್ದಾರಿಯುತ ಹುದ್ದೆಯಲ್ಲಿ ಇರುವವರು ತಮ್ಮ ಪದಗಳನ್ನು ಜಾಗರೂಕವಾಗಿ ಬಳಸಬೇಕು. ಅವರು ಬಳಸುವ ಮಾತುಗಳು ಅವರದೇ ವೈಯಕ್ತಿಕ ಗೌರವ ಮತ್ತು ಅವರು ಮಾತನಾಡುವ ವಿಚಾರಗಳ ಭಾಗವಾಗಿರುವವರ ಗೌರವವನ್ನೂ ಒಳಗೊಂಡಿರುತ್ತದೆ. ಅಧಿಕಾರದ ಸ್ಥಾನದಲ್ಲಿ ಇರುವವರು ಇದನ್ನು ಅರಿತು ಮಾತನಾಡುವುದು ಉತ್ತಮ ಎಂದು ಗಿರೀಶ್ ಲಿಂಗಣ್ಣ ಸಲಹೆ ನೀಡಿದ್ದಾರೆ.
ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ವಿರುದ್ಧ ಜೆಡಿಎಸ್ ವಾಗ್ದಾಳಿ!
ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ʼಕಳ್ಳನ ಮನಸ್ಸು ಹುಳ್ಳಳ್ಳಗೆʼ ಎಂದು ಟೀಕಿಸಿದೆ. ʼಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು. ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕುಮಾರಸ್ವಾಮಿಯವರ ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳುಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ. ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹʼ ಎಂದು ಜೆಡಿಎಸ್ ಕುಟುಕಿದೆ.
ಇದನ್ನೂ ಓದಿ: ಮುಡಾ ಪ್ರಕರಣವೇ ಬೇರೆ, ಈ ಘಟನೆಯೆ ಬೇರೆ : ಜೋಶಿ
ʼಭೂ ವ್ಯವಹಾರವೊಂದರಲ್ಲಿ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಕಡುಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್‌ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹುಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ರೂ. ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ ಎಂದು ಎಂದು ಜೆಡಿಎಸ್ ಪ್ರಶ್ನಿಸಿದೆ.
ʼಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ.ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ. ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು, ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಸಿರುವ ಈ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ. ಎಂ.ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಸಿಯೇಷನ್, ಕೇಂದ್ರ ಗೃಹ ಸಚಿವರು ಈ ಐಪಿಎಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕುʼ ಎಂದು ಜೆಡಿಎಸ್ ಒತ್ತಾಯಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.