ಹಳೆ ಮೊಬೈಲ್ ಕೊಟ್ಟ ಕಂಪನಿಗೆ ಹೊಸ ಹ್ಯಾಂಡ್ ಸೆಟ್ ಕೊಡಲು ಆಯೋಗದ ಆದೇಶ

ಬಸವನಗರದ ನಿವಾಸಿ ರಾಷ್ಟ್ರೀಕೃತ ಬ್ಯಾಂಕಿನ ಉದ್ಯೋಗಿ, ಕಿರಣಕುಮಾರ ಅನ್ನುವವರು ದಿ.ಅಕ್ಟೋಬರ್ 20. 2022 ರಂದು ಡಾರ್ಕನೋವಾ, 128 ಜಿಬಿ ಮೊಬೈಲ್‍ನ್ನು ಫ್ಲಿಪ್‍ಕಾರ್ಟ ಮೂಲಕ ರೂ.26,990 ಗೆ ಆನ್‍ಲೈನ್‍ನಲ್ಲಿ ಖರೀದಿಸಿದ್ದರು. ದಿ.ಅಕ್ಟೋಬರ್ 24. 2022 ರಂದು ಆ ಮೊಬೈಲ್ ದೂರುದಾರರಿಗೆ ತಲುಪಿತು. ಬಾಕ್ಸ ತೆರೆದು ನೊಡಿದಾಗ ಸರಿಯಾಗಿ ಅದನ್ನು ಪ್ಯಾಕಿಂಗ್ ಮಾಡಿರಲಿಲ್ಲ. ಮೊಬೈಲ್ ಮೇಲಿನ ಸ್ಕ್ರೀನ್ ಧೂಳಿನಿಂದ ಆವರಿಸಿದ್ದು ಅದು ಹಳೆಯ ಮೊಬೈಲ್ ಹ್ಯಾಂಡ್ ಸೆಟ್ ಆಗಿತ್ತು.

Written by - Manjunath N | Last Updated : Jun 2, 2023, 08:59 PM IST
  • ಒಂದು ತಿಂಗಳೊಳಗಾಗಿ ಅದೇ ಮಾದರಿಯ ಹೊಸ ಮೊಬೈಲ್‍ನ್ನು ದೂರುದಾರರಿಗೆ ಕೊಡಲು ಆದೇಶಿಸಿದೆ
  • ಮೊಬೈಲ್‍ನ ಕಿಮ್ಮತ್ತು ರೂ.26,990 ಗಳನ್ನು 8% ಬಡ್ಡಿ ಸಮೇತ ಲೆಕ್ಕಹಾಕಿ ಮರಳಿಸುವಂತೆ ಆದೇಶದಲ್ಲಿ ತಿಳಿಸಿದೆ
ಹಳೆ ಮೊಬೈಲ್ ಕೊಟ್ಟ ಕಂಪನಿಗೆ ಹೊಸ ಹ್ಯಾಂಡ್ ಸೆಟ್ ಕೊಡಲು ಆಯೋಗದ ಆದೇಶ title=

ಧಾರವಾಡ: ಬಸವನಗರದ ನಿವಾಸಿ ರಾಷ್ಟ್ರೀಕೃತ ಬ್ಯಾಂಕಿನ ಉದ್ಯೋಗಿ, ಕಿರಣಕುಮಾರ ಅನ್ನುವವರು ದಿ.ಅಕ್ಟೋಬರ್ 20. 2022 ರಂದು ಡಾರ್ಕನೋವಾ, 128 ಜಿಬಿ ಮೊಬೈಲ್‍ನ್ನು ಫ್ಲಿಪ್‍ಕಾರ್ಟ ಮೂಲಕ ರೂ.26,990 ಗೆ ಆನ್‍ಲೈನ್‍ನಲ್ಲಿ ಖರೀದಿಸಿದ್ದರು. ದಿ.ಅಕ್ಟೋಬರ್ 24. 2022 ರಂದು ಆ ಮೊಬೈಲ್ ದೂರುದಾರರಿಗೆ ತಲುಪಿತು. ಬಾಕ್ಸ ತೆರೆದು ನೊಡಿದಾಗ ಸರಿಯಾಗಿ ಅದನ್ನು ಪ್ಯಾಕಿಂಗ್ ಮಾಡಿರಲಿಲ್ಲ. ಮೊಬೈಲ್ ಮೇಲಿನ ಸ್ಕ್ರೀನ್ ಧೂಳಿನಿಂದ ಆವರಿಸಿದ್ದು ಅದು ಹಳೆಯ ಮೊಬೈಲ್ ಹ್ಯಾಂಡ್ ಸೆಟ್ ಆಗಿತ್ತು.

ಇದನ್ನೂ ಓದಿ: ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿ ತನಗೆ ಹೊಸ ಬ್ರಾಂಡ್ ಹ್ಯಾಂಡ್ ಸೆಟ್ ಕೊಡುವಂತೆ ವಿನಂತಿಸಿದ್ದರು. ಆದರೆ ಅವರ ವಿನಂತಿಯನ್ನು ಎದುರುದಾರರು ತಿರಸ್ಕರಿಸಿದ್ದರು. ಈ ವಿಷಯವಾಗಿ ದೂರುದಾರರು ನ್ಯಾಷನಲ್ ಕಂಜುಮರ್ ಹೆಲ್ಪಲೈನ್‍ಗೆ ದೂರು ಕೊಟ್ಟಿದ್ದರು. ಎದುರುದಾರರ ಟೆಕ್ನಿಷಿಯನ್‍ಗೆ ತೋರಿಸಿದಾಗ ಇದು ಹಳೆಯ ಮೊಬೈಲ್ ಹ್ಯಾಂಡ್ ಸೆಟ್ ಅಂತ ಅವರು ಖಚಿತಪಡಿಸಿದರು. ಈ ವಿಷಯವನ್ನು ಎದುರುದಾರರಿಗೆ ತಿಳಿಸಿದರೂ ಕೂಡ ಅವರು ಸಮಸ್ಯೆ ಬಗೆಹರಿಸದೆ ಹೊಸ ಮೊಬೈಲ್ ಹ್ಯಾಂಡ್ ಸೆಟ್ ಬದಲಿಗೆ ಹಳೆಯ ಮೊಬೈಲ್ ಕೊಟ್ಟು ಗ್ರಾಹಕನಾದ ತನಗೆ ಫ್ಲಿಪ್‍ಕಾರ್ಟ ಮತ್ತು ಅದನ್ನು ಸರಬರಾಜು ಮಾಡಿದ ಕಂಪನಿಯವರಿಂದ ಮೋಸವಾಗಿದೆ. ಕಾರಣ ಎದುರುದಾರರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಅನ್ಯಾಯದ ವ್ಯಾಪಾರ ಅಭ್ಯಾಸ ಮಾಡಿದ್ದಾರೆಂದು ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಫಿರ್ಯಾದಿದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ವಿಶಾಲಾಕ್ಷಿ. ಅ. ಬೋಳಶೆಟ್ಟಿ ಹಾಗೂ ಪ್ರಭು ಸಿ. ಹಿರೇಮಠ ಸದಸ್ಯರು, ದೂರುದಾರರು ರೂ.26,990 ಗಳಷ್ಟು ಹೇರಳ ಮೊತ್ತದ ಹಣ ವಿನಿಯೋಗಿಸಿ ತಮ್ಮ ಇಚ್ಛಾನುಸಾರ ಉಪಯೋಗಿಸಲು ವಿನೂತನ ಮಾದರಿಯ ಹೊಸ ಮೊಬೈಲ್ ಖರೀದಿಸಿದ್ದರೂ ಎದುರುದಾರರು ಅವರಿಗೆ ಬಳಕೆಯಾದ ಹಳೆ ಮೊಬೈಲ್ ಸೆಟ್ ಸರಬರಾಜು ಮಾಡಿರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿ ಆಗುತ್ತದೆ ಅಂತ ಆಯೋಗ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌

ದೂರುದಾರರಿಗೆ ಮೋಸವೇಸಗಿರುವುದು ಮೇಲ್ನೊಟಕ್ಕೆ ಕಂಡು ಬರುತ್ತದೆ ಅಂತ ಆಯೋಗ ತೀರ್ಪು ನೀಡಿ ಅದಕ್ಕಾಗಿ ಅದನ್ನು ಸರಬರಾಜು ಮಾಡಿದ ಬೆಂಗಳೂರಿನ ಲಾಸ್ಟೋರ್ ಕಂಪನಿಯವರು ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ಅದೇ ಮಾದರಿಯ ಹೊಸ ಮೊಬೈಲ್‍ನ್ನು ದೂರುದಾರರಿಗೆ ಕೊಡಲು ಆದೇಶಿಸಿದೆ. ಒಂದು ತಿಂಗಳೊಳಗಾಗಿ ಮೊಬೈಲ್ ಹ್ಯಾಂಡ್ ಸೆಟ್ ಕೊಡಲು ಅವರು ವಿಫಲರಾದಲ್ಲಿ ನಂತರ ಮೊಬೈಲ್‍ನ ಕಿಮ್ಮತ್ತು ರೂ.26,990 ಗಳನ್ನು 8% ಬಡ್ಡಿ ಸಮೇತ ಲೆಕ್ಕಹಾಕಿ ಮರಳಿಸುವಂತೆ ಆದೇಶದಲ್ಲಿ ತಿಳಿಸಿದೆ. ಇಂತಹ ಅನುಚಿತ ವ್ಯಾಪಾರದಿಂದ ದೂರುದಾರರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ಹಿಂಸೆಗೆ ರೂ.15,000 ಪರಿಹಾರ ಮತ್ತು ಪ್ರಕರಣದ ಖರ್ಚು ಅಂತ ರೂ.5,000 ಕೊಡುವಂತೆ ಎದುರುದಾರರಿಗೆ ತನ್ನ ಆದೇಶದಲ್ಲಿ ಆಯೋಗ ತಿಳಿಸಿದೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾರ್ ಮತ್ತು ಸಹಾಯಕ ಅಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News