ಧಾರವಾಡ: ಹುಬ್ಬಳ್ಳಿಯ ಗೋಲ್ಡನ್ ಹೈಟ್ಸ್ ಅಪಾರ್ಟ್ಮೆಂಟ್, ಕಾರವಾರ ರೋಡ, ನಿವಾಸಿಯಾದ ಕಾಂತಾ ನಂದಿಕೇಶ್ವರ ಅನ್ನುವವರು 2011ನೇ ಇಸವಿಯಲ್ಲಿ ಗೋಲ್ಡನ್ ಹೋಮ್ಸ್ ಬಿಲ್ಡರ್ಸ್ ಕಡೆಯಿಂದ ರೂ.20 ಲಕ್ಷ 42 ಸಾವಿರ 120 ರೂಪಾಯಿಗಳಿಗೆ ಪ್ಲ್ಯಾಟ್ ನಂ.ಜಿ-004 ಖರೀದಿಸಿದ್ದರು.
ಈ ಬಗ್ಗೆ ಉಭಯತರ ಮಧ್ಯೆ ಖರೀದಿ ಒಪ್ಪಂದ ಪತ್ರ ಆಗಿತ್ತು. ಪ್ಲ್ಯಾಟ್ ಕಟ್ಟಿಸಿ ಸ್ವಾಧೀನತೆ ಕೊಟ್ಟಿದ್ದರೂ ಸದರಿ ಬಿಲ್ಡ್ರ್ಸ್ ದೂರುದಾರರಿಗೆ ನೋಂದಾಯಿತ ಕ್ರಯ ಪತ್ರ ಮಾಡಿಕೊಟ್ಟಿರಲಿಲ್ಲ ಆ ಕಾರಣದಿಂದ ಗೋಲ್ಡನ್ ಹೋಮ್ಸ್ ಬಿಲ್ಡ್ರ್ಸ್ರವರು ಸೇವಾ ನ್ಯೂನ್ಯತೆ ಎಸಗಿ ತನಗೆ ಮೋಸ ಮಾಡಿದ್ದಾರೆ ಅಂತಾ ಹೇಳಿ ಅವರ ವಿರುದ್ಧಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರೇ 10 ಕೆಜಿ ಅಕ್ಕಿ ಎಲ್ಲಿ: ಬಿಜೆಪಿ ಪ್ರಶ್ನೆ
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಅವರು ದೂರುದಾರ ಪೂರ್ತಿ ಹಣಕೊಟ್ಟ ಮೇಲೆ ಗೋಲ್ಡನ್ ಹೋಮ್ಸ್ ಬಿಲ್ಡ್ರ್ಸ್ರವರು ಪ್ಲ್ಯಾಟ ನಿರ್ಮಿಸಿ ಸ್ವಾಧೀನತೆ ಕೊಟ್ಟಿದ್ದರೂ ಆ ಬಗ್ಗೆ ನೋಂದಾಯಿತ ಕ್ರಯ ಪತ್ರ ಮಾಡಿಕೊಡದೇ ಇರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
ಇದನ್ನೂ ಓದಿ: ರೇಣುಕಾಚಾರ್ಯ-ಯಡಿಯೂರಪ್ಪ ಸುದೀರ್ಘ ಮಾತುಕತೆ: ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ
ತೀರ್ಪು ನೀಡಿದ 45 ದಿವಸಳ ಒಳಗಾಗಿ ದೂರುದಾರರ ಪರವಾಗಿ ನೋಂದಾಯಿತ ಕ್ರಯಪತ್ರ ಮಾಡಿಕೊಡುವಂತೆ ಆದೇಶಿಸಿದೆ. ಅದಕ್ಕೆ ತಪ್ಪಿದ್ದಲ್ಲಿ ಕೋರ್ಟ ಕಮೀಷನರ್ ಮೂಲಕ ದೂರುದಾರರು ತನ್ನ ಸ್ವಂತ ಖರ್ಚಿನಲ್ಲಿ ನೋಂದಾಯಿತ ಕ್ರಯ ಪತ್ರ ಪಡೆಯಲು ಅರ್ಹರಿದ್ದಾರೆಂದು ಆಯೋಗ ತನ್ನ ತೀರ್ಪಿನಲ್ಲಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.