ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವ ಹಿನ್ನೆಲೆ 26 ಗ್ರಾಮ ಪಂಚಾಯಿತಿಗಳು ಹಾಗೂ ವಿಚಾರಣಾ ಹಂತದಲ್ಲಿರುವ ಒಂದು ಗ್ರಾಮ ಪಂಚಾಯಿತಿ ಸೇರಿದಂತೆ ಒಟ್ಟು 27 ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಕೈ ಬಿಟ್ಟಿದೆ. ಹೀಗಾಗಿ ರಾಜ್ಯದ 5762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಬದಲು 5735 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಉಡುಪಿ ಜಿಲ್ಲಾ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ(Gram Panchayats)ಗೆ ಸೇನಾಪುರ ಗ್ರಾಮ ಸೇರ್ಪಡೆ ಪ್ರಶ್ನಿಸಿ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಮೇಲ್ಮನವಿ ಸಲ್ಲಿಸಲಾಗಿದೆ. ಇದರ ವಿಚಾರಣೆ ನಡೆಯುತ್ತಿರುವ ಕಾರಣ ಹೊಸಾಡು ಗ್ರಾಮ ಪಂಚಾಯಿತಿ ಅನ್ನು ಚುನಾವಣೆಯಿಂದ ಕೈ ಬಿಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.


Students: 8, 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ..!


ದಾವಣಗೆರೆ ಜಿಲ್ಲಾಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ, ಹರಿಹರ ತಾಲೂಕಿನ ಗುತ್ತೂರು, ಕೋಲಾರ ತಾಲೂಕಿನ ವೇಮಗಲ, ಕುರುಗಲ, ಶೆಟ್ಟಿಹಳ್ಳಿ, ಚೌಡದೇವನಹಳ್ಳಿ, ದಕ್ಷಿಣ ಕನ್ನಡ ಜಿಲ್ಲಾಯ ಮಂಗಳೂರು ತಾಲೂಕಿನ ಕಿನ್ನಿಗೋಳಿ, ಮನ್ನಬೆಟ್ಟು, ಕಟೀಲು (ಕೊಂಡೆ ಮೂಲ), ಉಡುಪಿ ಜಿಲ್ಲಾಯ ಕುಂದಾಪುರ ತಾಲೂಕಿನ ಹೊಸಾಡು ಹಾಗೂ ಉತ್ತರ ಕನ್ನಡ ಜಿಲ್ಲಾಯ ಹೊನ್ನಾವರ ತಾಲೂಕಿನ ಮಂಕಿ (ಗುಳದಕೇರಿ), ಮಂಕಿ-ಎ(ಹಳೆಮರ), ಮಂಕಿ-ಬಿ(ಅನಂತವಾಡಿ), ಮಂಕಿ-ಸಿ(ಚಿತ್ತಾರ) ಸೇರಿವೆ.


BJP: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ನಿರ್ಣಯ..!


ಬೆಂಗಳೂರು ಉತ್ತರ ತಾಲೂಕಿನ ಸೋಮಶೆಟ್ಟಿಹಳ್ಳಿ, ಚಿಕ್ಕ ಬಾಣಾವರ, ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ, ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ, ಸೊಣ್ಣಪ್ಪನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ, ಬೆಳಗಾವಿ ಜಿಲ್ಲಾ ಯರಗಟ್ಟಿ ತಾಲೂಕಿನ ಯರಗಟ್ಟಿ, ಅಥಣಿ ತಾಲೂಕಿನ ಕಾಗವಾಡ, ಬೆಳಗಾವಿ ತಾಲೂಕಿನ ಮಚ್ಚೆ ಮತ್ತು ಪೀರನವಾಡಿ, ರಾಯಚೂರು ಜಿಲ್ಲಾಯ ದೇವದುರ್ಗ ತಾಲೂಕಿನ ಜಾಲಹಳ್ಳಿ, ಚಿಂಚೋಡಿ, ಕರಡಿಗುಡ್ಡ.


Congress: ಗ್ರಾ.ಪಂ. ಚುನಾವಣೆ: ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಿದ ಕಾಂಗ್ರೆಸ್!