ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಮಾರ್ಚ್ 12ರಿಂದ 16 ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ಎಂದಿನಂತೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಈ ಸಂಬಂಧವಾಗಿ ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ಅವರು ತಿಳಿಸಿದ್ದಾರೆ.ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಂಗತಿಗೆ ಸಂಬಂಧಿಸಿದಂತೆ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.


ಇದನ್ನೂ ಓದಿ: Arvind Kejriwal : ಮೊಬೈಲ್ ರಿಪೇರಿ ಮಾಡಿದವನು ಸಿಎಂ ಚನ್ನಿಯನ್ನು ಸೋಲಿಸಿದ : ಸಿಎಂ ಕೇಜ್ರಿವಾಲ್ 


ಸ್ಪರ್ಧಾತ್ಮಕ ಪರೀಕ್ಷೆಗೆ (Competitive Examination) ಸಂಬಂಧಿಸಿದಂತೆ ಯಾವೊಂದು ಪ್ರಕರಣವೂ ನ್ಯಾಯಾಲಯದಲ್ಲಿಲ್ಲ. ಹೀಗಿರುವಾಗ ತಡೆಯಾಜ್ಞೆ ನೀಡುವ ಪ್ರಮೇಯ ಎಲ್ಲಿಂದ ಬರುತ್ತದೆ? ಆದ್ದರಿಂದ, ಅರ್ಹ ಅಭ್ಯರ್ಥಿಗಳು ಇಂತಹ ಗಾಳಿಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳದೆ ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.