ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಮಂಡ್ಯದ ಸಾರ್ವಜನಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಅಶ್ವಥ್ ನಾರಾಯಣ್ ಪ್ರಚೋದನಕಾರಿ ಹೇಳಿಕೆಗೆ ಕುರುಬ ಸಮುದಾಯ ಕೆಂಡಾಮಂಡಲವಾಗಿದೆ‌. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮವಾಗಬೇಕು ಅಂತಾ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ದೂರು ದಾಖಲಿಸಿದೆ.


COMMERCIAL BREAK
SCROLL TO CONTINUE READING

ಅಶ್ವತ್ ನಾರಾಯಣ ವಿರುದ್ಧ ಕುರುಬ ಸಮುದಾಯ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿಗಳು ಕೂಡಲೇ ಅಶ್ವಥ್ ನಾರಾಯಣ್ ರನ್ನ ಸಚಿವ ಸ್ಥಾನದಿಂದ ಕೈಬಿಟ್ಟು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ‌ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಕುರುಬ ಸಮುದಾಯದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶ ಮೂರ್ತಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೊಮ್ಮಾಯಿ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?


ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ 'ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜದ ಅಗ್ರಗಣ್ಯ ವ್ಯಕ್ತಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರನ್ನ ಟಿಪ್ಪು ಸುಲ್ತಾನನಿಗೆ ಹೋಲಿಸಿರುವುದು, ಮತ್ತು ಟಿಪ್ಪು ಸುಲ್ತಾನನನ್ನ ಉರೀಗೌಡ - ದೊಡ್ಡ ನಂಜೇಗೌಡ ಹೊಡೆದು ಕೊಲೆ ಮಾಡಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕೆಂದು ಹೇಳುವ ಮೂಲಕ ಅಶ್ವಥ್ ನಾರಾಯಣ್ ಸಾರ್ವಜನಿಕವಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರಚೋದನೆ ನೀಡಿದ್ದಾರೆ.


ಬಳಿಕ ವಿಧಾನಸಭೆಯಲ್ಲಿ ತಮ್ಮ ಹೇಳಿಕೆಯಲ್ಲಿ ವೈಯಕ್ತಿಕ ಉದ್ದೇಶವಿರಲಿಲ್ಲ, ಇದೊಂದು ರಾಜಕೀಯ ಉದ್ದೇಶದ ಹೇಳಿಕೆ ಎಂದಿದ್ದಾರೆ‌. ಆದರೆ ಸಚಿವರು ಬಹಿರಂಗವಾಗಿ ಸಿದ್ದರಾಮಯ್ಯನವರ ಕ್ಷಮೆ ಕೇಳಬೇಕು ಎಂದು ವೆಂಕಟೇಶಮೂರ್ತಿ ಆಗ್ರಹಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.