ರಾಜ್ಯ ಸರ್ಕಾರವು ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟು ಹಂಚಿಕೆ ಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾರ್ಮ ವಾಮಮಾರ್ಗವನ್ನು ಹುಡುಕಿಕೊಂಡು ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ₹ ಬೆಲೆಬಾಳುವ ನಿವೇಶನ ಗಳನ್ನು ಹಂಚಿಕೆ ಮಾಡಿರುವ ಸರ್ಕಾರದ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಈ ಕೂಡಲೇ ಈ ಬಿಡಿಎ ಆಯುಕ್ತರನ್ನು ವರ್ಗಾವಣೆಗೊಳಿಸಬೇಕೆಂದು ಮೌಖಿಕ ಆದೇಶ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ


ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತರನ್ನು ಭೇಟಿಯಾಗಿ ಇಂದು ಆಮ್ ಆದ್ಮಿ ಪಕ್ಷದಿಂದ ದೂರನ್ನು ದಾಖಲಿಸಲಾಗಿದೆ.


ಕಳೆದ 4ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ವಿಫಲರಾಗಿರುವ ಬಿಜೆಪಿ ಸರ್ಕಾರ ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಈ ರೀತಿಯ ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡುವ ಪರಿ 40 %ಕಮಿಷನ್ ಬಿಜೆಪಿ  ಸರ್ಕಾರದ ಮತ್ತೊಂದು ರೂಪವಾಗಿದೆ ಎಂದು ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ  ಸರ್ಕಾರಕ್ಕೆ ಛೀಮಾರಿ ಹಾಕಿದರು.


ಇದನ್ನೂ ಓದಿ: ಕರಡು ಮತದಾರರ ಪಟ್ಟಿ ಬಿಡುಗಡೆ: ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ


ಸುಪ್ರೀಂಕೋರ್ಟ್  2021 ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ₹ ಬೆಲೆ ಬಾಳುವ ಆರ್ ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರು ಗಳಿಗೆ ಸೈಟು ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತು ಈ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು ಎಂದು ಮೋಹನ್ ದಾಸರಿ ವಿಷಾದ ವ್ಯಕ್ತಪಡಿಸಿದರು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಮಿಷನ್ ‘ಪಾಪದ ಕೊಡ’ ತುಂಬಿದ್ರೂ ಬುದ್ದಿ ಬಂದಿಲ್ಲ: ಕಾಂಗ್ರೆಸ್


ಉಂಡೂ ಹೋದ ಕೊಂಡೂ ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಅರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ.ಈ ಕೂಡಲೇ ಅರಗ ಜ್ಞಾನೇಂದ್ರ ರನ್ನು  ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ  ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.  ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾದ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.