BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು

ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿರುವ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಹಾಗೂ ವಕೀಲರ ತಂಡದಿಂದ ದೂರು ನೀಡಲಾಗಿದೆ.

Written by - Zee Kannada News Desk | Last Updated : Mar 28, 2022, 04:53 PM IST
  • ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿರುವ ಆರೋಪ
  • ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ
  • ಸಾಮಾಜಿಕ ಕಾರ್ಯಕರ್ತ ಕೆ.ಸಿರಾಜಣ್ಣ ಹಾಗೂ ವಕೀಲರ ತಂಡದಿಂದ ದೂರು
BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು title=
ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ವಿರುದ್ಧ ಎಸಿಬಿ(ACB)ಗೆ ದೂರು ನೀಡಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿರುವ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ(KC Rajanna) ಹಾಗೂ ವಕೀಲರ ತಂಡದಿಂದ ದೂರು ನೀಡಲಾಗಿದೆ.

ಕೆಐಎಡಿಬಿಗೆ ಸೇರಿದ ಭೂಮಿ ಮಂಜೂರು ಮಾಡಿದ್ದ ಆರೋಪ ಹಿನ್ನೆಲೆ ಬಿಎಸ್ ವೈ(BSY) ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ದೇವನಹಳ್ಳಿಯ (Devanahalli) ಹರಳೂರು ಮತ್ತು ಪೂಲನಹಳ್ಳಿ ಬಳಿಯ ಕೆಐಎಡಿಬಿಗೆ ಸೇರಿದ 116 ಎಕರೆ ಜಮೀನನ್ನು ಮಂಜೂರು ಮಾಡಿದ್ದರಂತೆ.

ಇದನ್ನೂ ಓದಿ: Basavaraj Bommai : '2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಗಲಿದೆ ಬಹುಮತ'

ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನು ಮಂಜೂರು(Land Granted)ಮಾಡಿಕೊಟ್ಟಿದ್ದಾರೆಂದು ಆರೋಪಿಸಲಾಗಿದೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು ಆದರೆ, ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ವಿ‌ವಿ ಸ್ಥಾಪಿಸಲು ಜಮೀನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರತಿ ಎಕರೆಗೆ ಅಪರ ಮುಖ್ಯ ಕಾರ್ಯದರ್ಶಿ 1.61 ಕೋಟಿ ರೂ. ದರ ನಿಗದಿಪಡಿಸಿದ್ದರು. ಅದರೆ 116.16 ಎಕರೆ ಜಾಗವನ್ನು ಕೇವಲ 50 ಕೋಟಿ ರೂ.ಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ನಿಗದಿಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿ ರೂ.ಗೆ ಮಂಜೂರು ಮಾಡಲಾಗಿದೆ. ಸಿಎಂ ಆಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಯಡಿಯೂರಪ್ಪ(BS Yediyurappa) ಜಮೀನು ಮಂಜೂರು ಮಾಡಿದ್ದಾರೆ. ಈ ಮೂಲಕ  ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ. ದೂರು(ACB Complaint)ದಾಖಲಿಸಿ ತನಿಖೆ ನಡೆಸುವಂತೆ ಎಸಿಬಿಗೆ ರಾಜಣ್ಣ ದೂರು ನೀಡಿದ್ದಾರೆ.

ಇದನ್ನೂ ಓದಿ: DC Thammanna : ಸಂಸದೆ ಸುಮಲತಾಗೆ ಓಪನ್ ಚಾಲೇಂಜ್ ಹಾಕಿದ ಶಾಸಕ ಡಿಸಿ ತಮ್ಮಣ್ಣ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News