ಗೋಲ್‌ಮಾಲ್ ಆರೋಪ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲು

Lakshmi Hebbalkar : ಪೌಷ್ಠಿಕ ಆಹಾರ ಸರಬರಾಜು ಮಾಡಲು‌ ಅನರ್ಹ ಸಂಸ್ಥೆಗಳಿಗೆ ಗುತ್ತಿಗೆ ವ್ಯವಹಾರದಲ್ಲಿ‌‌ ಸುಮಾರು 600 ಕೋಟಿ‌ ರೂ. ಅವ್ಯವಹಾರ‌‌ ನಡೆದಿದ್ದು, ಅಕ್ರಮದ ಹಿಂದೆ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈವಾಡವಿದೆ ಎಂದು ಆರೋಪಿಸಲಾಗಿದೆ.

Written by - VISHWANATH HARIHARA | Edited by - Krishna N K | Last Updated : Nov 17, 2023, 08:17 PM IST
  • ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮೇಲೆ ಗೋಲ್‌ಮಾಲ್‌ ಆರೋಪ.
  • ಸಚಿವೆ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
  • ವಕೀಲ ಎಸ್.ನಟರಾಜ ಶರ್ಮಾ ರಿಂದ ಲೋಕಾಯುಕ್ತಕ್ಕೆ ದೂರು.
ಗೋಲ್‌ಮಾಲ್ ಆರೋಪ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲು title=

ಬೆಂಗಳೂರು : ಅಪೌಷ್ಠಿಕತೆ ಹೋಗಲಾಡಿಸಲು ಗರ್ಭೀಣಿ ಮತ್ತು ಮಕ್ಕಳಿಗೆ ನೀಡಲಾಗುವ ಪೌಷ್ಠಿಕ ಆಹಾರ ಸರಬರಾಜು ಮಾಡಲು‌ ಅನರ್ಹ ಸಂಸ್ಥೆಗಳಿಗೆ ಗುತ್ತಿಗೆ ವ್ಯವಹಾರದಲ್ಲಿ‌‌ ಸುಮಾರು 600 ಕೋಟಿ‌ ರೂ. ಅವ್ಯವಹಾರ‌‌ ನಡೆದಿದ್ದು, ಅಕ್ರಮದ ಹಿಂದೆ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈವಾಡವಿದೆ ಎಂದು ಆರೋಪಿಸಿ ವಕೀಲ ಎಸ್.ನಟರಾಜ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪ್ರಧಾನ ಕಾರ್ಯದರ್ಶಿ ಜೆ.ಸಿ ಪ್ರಕಾಶ್ ಹಾಗೂ ನಿರ್ದೇಶಕ ಸೇರಿ ಮೂವರ ವಿರುದ್ಧ ದೂರು ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು‌ ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭೀಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹಗೊಂಡಿರುವ ಸಹಕಾರ ಸಂಸ್ಥೆಗಳಿಗೆ ಟೆಂಡರ್ ನೀಡುವ ವಿಚಾರದಲ್ಲಿ ಗೋಲ್‌ಮಾಲ್ ನಡೆದಿದೆ.

ಇದನ್ನೂ ಓದಿ: ಲವ್‌, ಸೆಕ್ಸ್‌, ದೋಖಾ..! ಬಳ್ಳಾರಿ ಸಂಸದನ ಮಗನ ವಿರುದ್ಧ ಎಫ್‌ಐಆರ್‌

ಈ ಹಿಂದೆ ಕಪ್ಪು ಪಟ್ಟಿಯಲ್ಲಿರುವ  ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪೆನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲಾಗಿ ಟೆಂಡರ್ ನೀಡಿದ್ದು ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಕಳಪೆ‌ ಗುಣಮಟ್ಟದ್ದಾಗಿತ್ತು. ಹೀಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈ ಕೋರ್ಟ್ ಆದೇಶಿಸಿತ್ತು. ಆದರೆ ಆದೇಶ ಉಲ್ಲಂಘಿಸಿ ಬ್ಲಾಕ್ ಲಿಸ್ಟ್ ನಲ್ಲಿರುವ ಕಂಪೆನಿಗೆ ಟೆಂಡರ್ ನೀಡಿರುವುದಾಗಿ ದೂರಿನಲ್ಲಿ ನಟರಾಜ ಶರ್ಮಾ ಉಲ್ಲೇಖಿಸಿದ್ದಾರೆ. 

ನಿಯಮ ಉಲ್ಲಂಘಿಸಿ ಬ್ಲಾಕ್‌ ಲಿಸ್ಟ್ ಕಂಪೆನಿಗೆ ಟೆಂಡರ್ ನೀಡಿ ಸುಮಾರು 600 ಕೋಟಿ ಅವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪ್ರಧಾನ ಕಾರ್ಯದರ್ಶಿ ಜೆ.ಸಿ ಪ್ರಕಾಶ್ ಹಾಗೂ ನಿರ್ದೇಶಕರ ವಿರುದ್ಧ  ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ನಟರಾಜ್ ಅವರು‌ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News