Complete Lock Down : ಮೇ 10 ರಿಂದ 25 ರವರೆಗೆ ರಾಜ್ಯದಲ್ಲಿ ಸಂಪೂರ್ಣ 'ಲಾಕ್ ಡೌನ್'!

ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆ

Last Updated : May 7, 2021, 12:17 PM IST
  • ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಳ
  • ಮೇ 10 ರಿಂದ 25 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ
  • ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆ
Complete Lock Down : ಮೇ 10 ರಿಂದ 25 ರವರೆಗೆ ರಾಜ್ಯದಲ್ಲಿ ಸಂಪೂರ್ಣ 'ಲಾಕ್ ಡೌನ್'! title=

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 25 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.

ಇಂದು ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ. ಇಂದು ಸಂಜೆ ವೇಳೆಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : BS Yediyurappa : ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ : ಸಿಎಂ ಯಡಿಯೂರಪ್ಪ

ಸೋಮವಾರದಿಂದ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್(Complete Lock Down) ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ : ಕರ್ನಾಟಕ ರಾಜಕೀಯದಲ್ಲಿ ವಿಶ್ವನಾಥ್ V/s ವಿಶ್ವನಾಥ್.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News