ಬೆಂಗಳೂರು:  ನಾಳೆ (ಮೇ 24) ರಾಜ್ಯದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್ (Lockdown) ಇರಲಿದೆ. ಇಂದು ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಘೋಷಿಸಿದೆ. 


COMMERCIAL BREAK
SCROLL TO CONTINUE READING

ವಾರದ ಪೂರ್ವಾರ್ಧದಲ್ಲಿ ಲಾಕ್‌ಡೌನ್ ಸಡಿಲಿಸಿರುವುದಾದರೂ ಕೊರೊನಾವೈರಸ್ (Coronavirus) ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾನುವಾರ ನಿರ್ಬಂಧ ಮುಂದುವರೆಸುವುದಾಗಿ ಸರ್ಕಾರ ಹೇಳಿತ್ತು. ಅದರಂತೆ ಭಾನುವಾರದಂದು ಕರ್ಫ್ಯೂ ಜಾರಿಗೆ ತರಲಾಗಿದ್ದು ಲಾಕ್‌ಡೌನ್ ಸಡಿಲಿಕೆಗೂ ಮುನ್ನ ಇದ್ದಂತಹ ಎಲ್ಲಾ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಲ್ಲಿ ಭಾರೀ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಸರ್ಕಾರದ ಸೂಚನೆಗಳನ್ನು ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಪೂರ್ವ ನಿಗದಿತ ಮದುವೆ ಸಮಾರಂಭಗಳಿಗೆ ಅನುಮತಿ, ಷರತ್ತು ಅನ್ವಯ: 
ನಾಳೆ ರಾಜ್ಯದಲ್ಲಿ   ಲಾಕ್‌ಡೌನ್ ಜಾರಿಯಲ್ಲಿದ್ದರೂ ಸಹ ಪೂರ್ವ ನಿಗದಿತ ಮದುವೆಗಳಿಗೆ ಅನುವು ಮಾಡಿಕೊಟ್ಟಿರುವ ಸರ್ಕಾರ ಸಾಮಾಜಿಕ ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳ ಸಂಖ್ಯೆ ಮೀರದಂತೆ ಸರಳ ವಿವಾಹ ನೆರವೇರಿಸಲು ಅನುಮತಿ ನೀಡಿದೆ.


ಇದರ ಹೊರತಾಗಿ ಬೇರೆ ಶುಭ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.


ಲಾಕ್‌ಡೌನ್ ಸಂದರ್ಭದಲ್ಲಿ ಏನಿರುತ್ತೆ? ಏನಿರಲ್ಲ?
ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಸಮೂಹ ಸಾರಿಗೆ ಸೇವೆ ಇರುವುದಿಲ್ಲ. ಮಾತ್ರವಲ್ಲ ಬಸ್, ಆಟೋ, ಟ್ಯಾಕ್ಸಿ ಸಂಚಾರವನ್ನು ಸಹ ನಿಷೇಧಿಸಲಾಗಿದೆ.


ಅಗತ್ಯ ಸೇವೆಗಳಾದ ಹಾಲು, ಹಣ್ಣು, ತರಕಾರಿ ಮಾರಾಟದಂತಹ ಚಟುವಟಿಕೆಗಳು ಮುಂದುವರೆಯಲಿದ್ದು ಔಷಧಿ ಅಂಗಡಿ, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.