ಬೆಂಗಳೂರು: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಪೂಜಾ ಸಾಮಾಗ್ರಿಗಳ ಖರೀದಿ ಮೊತ್ತ ಏರಿಕೆ ಮತ್ತು ಅರ್ಚಕರ ಭವನ ನಿರ್ಮಾಣಕ್ಕೆ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಅರ್ಚಕರು, ಆಗಮಿಕರು ಮತ್ತು ಉಪಾಧಿವಂತರ ಒಕ್ಕೂಟದಿಂದ ಸಿದ್ದರಾಮಯ್ಯನವರಿಗೆ ಅಭಿನಂದನೆಯನ್ನು ಸಲ್ಲಿಸಲಾಗಿದೆ.