ಒಂದ್ಕಡೆ ಉಚಿತ ಮತ್ತೊಂದು ಕಡೆ ಸುಲಿಗೆ: ರಾಜ್ಯ ಸರ್ಕಾರದ ವಿರುದ್ಧ ತಮಟೆ ಚಳುವಳಿ ನಡೆಸಿ ಆಕ್ರೋಶ
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ- ತಮಟೆ ಚಳವಳಿ ನಡೆಸಿ ಆಕ್ರೋಶ
ಚಾಮರಾಜನಗರ: ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ (Fuel Price Hike) ಖಂಡಿಸಿ ಕನ್ನಡಪರ ಹೋರಾಟಗಾರರು ತಮಟೆ ಚಳವಳಿ ನಡೆಸಿ ಆಕ್ರೋಶ ಹೊರಹಾಕಿದರು.
ರಾಷ್ಟ್ರೀಯ ಹೆದ್ದಾರಿ (National Highway) ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ರಸ್ತೆತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತಮಟೆ ಬಾರಿಸಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ- ಮೋದಿ ಅವಧಿಯಲ್ಲೇ ಅತಿ ಹೆಚ್ವು ತೈಲ ಬೆಲೆ ಏರಿಕೆ: ಸಚಿವ ಎಂ ಬಿ ಪಾಟೀಲ
ನಡು ರಸ್ತೆಯಲ್ಲಿ ತಮಟೆ ಬಾರಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಿರುದ್ಧ ಪ್ರತಿಭಟಿಸಿದ ಹೋರಾಟಗಾರರು ಕೂಡಲೇ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಇಳಿಸುವಂತೆ ಆಗ್ರಹಿದರು.
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ, ಕೂಡಲೇ ಇಂಧನ ಬೆಲೆ ಏರಿಸುವುದನ್ನು ಇಳಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.