Chamarajanagar bandh on December 31: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ, ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿಶ್ ಶಾ ನೀಡಿರುವ ಹೇಳಿಕೆ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ನಾಳೆ (ಡಿಸೆಂಬರ್ 31) ಚಾಮರಾಜನಗರ ಬಂದ್‌ಗೆ ಕರೆ ನೀಡಲಾಗಿದೆ.
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಾಮರಾಜನಗರ ಬಂದ್‌ಗೆ ನಿರ್ಧರಿಸಲಾಯಿತು.
ಇದನ್ನೂ ಓದಿ: ಬೈಕ್ ಖರೀದಿಸುವ ಆಸೆಗೆ 9 ದಿನದ ಮಗುವನ್ನ ಮಾರಿದ ಪೋಷಕರು! 60 ಸಾವಿರಕ್ಕೆ ಮನುಷ್ಯತ್ವ ಮಾರಿಕೊಂಡ್ರಾ
ಸಭೆಯಲ್ಲಿ SDPI ನಗರಸಭಾ ಸದಸ್ಯ ಎಂ.ಮಹೇಶ್, ದಲಿತ ಸಂಘರ್ಷ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ, ಯ.ನಾಗರಾಜು, ಲಾರಿ ಮಾಲೀಕರ ಸಂಘದ ಇರ್ಷಾದ್, ರಾಮಸಮುದ್ರ ಸುರೇಶ್ ಮಾತನಾಡಿ ಚಾಮರಾಜನಗರ ಬಂದ್ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಸಭೆಯ ನೇತೃತ್ವ ವಹಿಸಿದ್ದ ವೆಂಕಟರಮಣಸ್ವಾಮಿ ಮಾತನಾಡಿ, ಸಂಸಸ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡುವಂತೆ ಚಾಮರಾಜನಗರ ಬಂದ್‌ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: 2024ರಲ್ಲಿ ಸಂಭವಿಸಿರುವ ಅಪಘಾತಗಳ ಅಂಕಿಅಂಶ ಬಿಡುಗಡೆ: 824 ಗಂಭೀರ ಅಪಘಾತ, 845 ಜನ ಸಾವು
ಈ ಬಂದ್‌ಗೆ ವರ್ತಕರು, ಚಿತ್ರಮಂದಿರ ಮಾಲೀಕರು, ಬಸ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಪಟ್ಟಣದ ಎಲ್ಲಾ ಕೋಮಿನ ಸಮುದಾಯದವರು ಹಾಗೂ ಸಂಘ-ಸಂಸ್ಥೆಗಳಿಗೆ ಮನವಿ ಮಾಡಲಾಗಿದ್ದು, ಬಂದ್‌ಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.