ಬೆಂಗಳೂರು : ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ (by election) ಆಡಳಿತಾರೂಢ  BJP ಪ್ರತಿ ವೋಟಿಗೆ  2000 ರೂಪಾಯಿಗಳನ್ನು ವಿತರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸೋಲಿನ ಭಯದಿಂದಾಗಿ ಬಿಜೆಪಿ ಈ ರೀತಿ ಹಣ ಹಂಚುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಜೆಪಿ ಮೇಲೆ ಹೊರಿಸಿರುವ ಆರೋಪವನ್ನು ತಳ್ಳಿ ಹಾಕಿದ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai), ಕಾಂಗ್ರೆಸ್ ಇಂತಹ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿರುಗೇಟು ನೀಡಿದ್ದಾರೆ. ಜನರ ಪ್ರೀತಿ ಮತ್ತು ನಂಬಿಕೆಯೇ ಬಿಜೆಪಿಯ ಶಕ್ತಿ ಎಂದು ಅವರು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

"ನನಗೆ ತಿಳಿದಿರುವಂತೆ, ಈ ಚುನಾವಣೆಯಲ್ಲಿ ಬಹಳಷ್ಟು ಹಣವನ್ನು ಖರ್ಚು ಮಾಡಲಾಗುತ್ತಿದೆ. ಮಾಹಿತಿ ಪ್ರಕಾರ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರತಿ ಮತಕ್ಕೆ 2,000 ರೂಪಾಯಿಗಳನ್ನು ಹಂಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪಾದಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವ ಆಧಾರದ ಮೇಲೆ ಮತ ಕೇಳುತ್ತಾರೆ? ಹಣವನ್ನು ಹೊರತುಪಡಿಸಿ ಅವರಲ್ಲಿ ಏನೂ ಇಲ್ಲ. ಯಾವುದೇ ಸಾಧನೆಯನ್ನು ತೋರಿಸಲು ಸಾಧ್ಯವಿಲ್ಲ. ಕರೋನಾವನ್ನು (COVID-19) ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗಲಿಲ್ಲ. ಮೃತಪಟ್ಟವರಿಗೆ  ಸರಿಯಾದ ಪರಿಹಾರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಕರೋನಾ ಸಂಬಂಧಿತ ಖರೀದಿಗಳಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 


ಇದನ್ನೂ ಓದಿ : Electric Buses : ಶೀಘ್ರದಲ್ಲೇ ರಾಜ್ಯದ ರಸ್ತೆಗಳಿಯಲಿವೆ 50 AC ಎಲೆಕ್ಟ್ರಿಕ್ ಬಸ್‌ಗಳು!


ಇನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಕೂಡ ಬಿಜೆಪಿ ಪ್ರತಿ ಮತಕ್ಕೆ 2,000 ರೂ.ಗಳನ್ನು ವಿತರಿಸುತ್ತಿದೆ ಎಂದು ಆರೋಪಿಸಿದ್ದರು. ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಸೋಲುತ್ತದೆ ಎಂಬ ಗುಪ್ತಚರ ವರದಿಯನ್ನು ಮುಖ್ಯಮಂತ್ರಿಯವರು ಪಡೆದುಕೊಂಡಿದ್ದಾರೆ ಎಂದು ತೋರುತ್ತದೆ. ಹಾಗಾಗಿ, ಎಲ್ಲಾ ಸಚಿವರನ್ನು ಹಣದ ಚೀಲಗಳೊಂದಿಗೆ ಕಳುಹಿಸಿದ್ದಾರೆ ಮತ್ತು ನೆರೆಯ ಕ್ಷೇತ್ರದಿಂದ ಹಣವನ್ನು ವಿತರಿಸಲಾಗುತ್ತಿದೆ" ಎಂದು ಆಪಾದಿಸಿದ್ದಾರೆ. 


ಹಾನಗಲ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಅರೂಪಗಳ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಜನರ ಪ್ರೀತಿ ಮತ್ತು ವಿಶ್ವಾಸದಿಂದ ಚುನಾವಣೆಗೆ ಹೋಗುತ್ತಿದೆ, ಇದು ಪಕ್ಷದ ಶಕ್ತಿಯಾಗಿದೆ ಎಂದಿದ್ದಾರೆ. ಅಧಿಕಾರದಲ್ಲಿದ್ದಾಗ, ಕುಂದಗೋಳ, ಗುಂಡ್ಲುಪೇಟೆ ಮತ್ತು ನಂಜನಗೂಡಿನ  ಉಪಚುನಾವಣೆಯ ಸಮಯದಲ್ಲಿ- ನಾವು ಡಿಕೆಶಿ (DKS) ಚೀಲಗಳ ಅನುಭವವನ್ನು ನೋಡಿದ್ದೇವೆ. ಈಗ ಆ ಆರೋಪವನ್ನು ನಮ್ಮ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ" ಎಂದು ಟೀಕಿಸಿದ್ದಾರೆ. 


ಇದನ್ನೂ ಓದಿ : ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ನಳೀನ್ ಕುಮಾರ್ ಕಟೀಲ್ ಗೆ ಬಿಎಸ್ ವೈ ಕಿವಿಮಾತು


ಸಿಂಧಗಿ ಮತ್ತು ಹಾನಗಲ್ ಎರಡು ಸ್ಥಾನಗಳಿಗೆ ಅಕ್ಟೋಬರ್ 30 ರಂದು ನಡೆಯಲಿದ್ದು, ಮತ ಎಣಿಕೆ ನವೆಂಬರ್ 2 ರಂದು ನಡೆಯಲಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ