Voter ID Scam: ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?- ಕಾಂಗ್ರೆಸ್ ಪ್ರಶ್ನೆ

ವೋಟರ್ ಐಡಿ ಅಕ್ರಮ ಪ್ರಕರಣ ಸಂಬಂಧ ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Nov 28, 2022, 01:23 PM IST
  • ಚಿಲುಮೆ ಸಂಸ್ಥೆಯಲ್ಲಿ ವೋಟರ್ ಐಡಿ ಅಕ್ರಮದ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರ
  • ಸಚಿವ CN ಅಶ್ವತ್ಥ್ ನಾರಾಯಣ್ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ?
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್
Voter ID Scam: ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?- ಕಾಂಗ್ರೆಸ್ ಪ್ರಶ್ನೆ title=
ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ವೋಟರ್ ಐಡಿ ಅಕ್ರಮ ಪ್ರಕರಣ ವಿಚಾರ ಸಂಬಂಧ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಸಚಿವ ಅಶ್ವತ್ಥ್ ನಾರಾಯಣ್‍ಗೂ ಚಿಲುಮೆ ಸಂಸ್ಥೆಗೂ ಏನು ಸಂಬಂಧ? ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ? ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಗಡಿ ವಿವಾದ: ಕಾನೂನು ಸಮರಕ್ಕೆ ರಾಜ್ಯ ಸಿದ್ಧ ಎಂದ ಸಿಎಂ ಬೊಮ್ಮಾಯಿ

‘ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು? ಅವರ ಹಿತಾಸಕ್ತಿ ಏನಿತ್ತು? ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು? ಚೆಕ್, ಲೆಟರ್ ಹೆಡ್‌ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ? ಅಕ್ರಮಗಳ ಮಹಾಪೋಷಕ ಸಿಎಂ ಬಸವರಾಜ ಬೊಮ್ಮಾಯಿಯವರು ಜನತೆಗೆ ಉತ್ತರಿಸಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ರೈತರಿಗೆ ಸಂಕಷ್ಟ ಹೆಚ್ಚಿಸಿದ ಬಿಜೆಪಿ!

‘ಹಾಲು ಉತ್ಪಾದನೆಯನ್ನು ಹೆಚ್ಚಿಸುತ್ತೇವೆ ಎಂದಿತ್ತು ಬಿಜೆಪಿ. ಆದರೆ ಹೆಚ್ಚಿಸಿದ್ದು ಮಾತ್ರ ಹಾಲಿನ ದರ, ಮೇವು, ಹಿಂಡಿಗಳ ದರವನ್ನ ಮತ್ತು ರೈತರಿಗೆ ಸಂಕಷ್ಟವನ್ನು. ಹಾಲಿನ ಮೌಲ್ಯವರ್ಧನೆಗೆ, ರಫ್ತಿಗೆ ಒತ್ತುಕೊಡದ ಸರ್ಕಾರ ರೈತರಿಗೆ ಹಾಲಾಹಲವನ್ನು ಕೊಡುತ್ತಿದೆ. ಹಾಲಿನ ಬೆಂಬಲ ಬೆಲೆ ಕೊಡದಿರುವುದೇಕೆ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: Mandya: ಸಕ್ಕರೆ ನಾಡಿನಲ್ಲಿ ‘ಕಮಲ’ ಅರಳಿಸಲು ಪ್ಲಾನ್! ಸಂಸದೆ ಸುಮಲತಾ ಆಪ್ತ ಬಿಜೆಪಿ ಸೇರ್ಪಡೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News