Chaddi Campaign: ಚಡ್ಡಿ ಸುಟ್ಟು ಶಾಸಕ ಪಿ.ರಾಜೀವ್ ಮನೆಮುಂದೆ ಬೂದಿ ಇಟ್ಟರು!

‘ಕೈ’ ಕಾರ್ಯಕರ್ತರು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕರ್ನಾಟಕ(NSUI)ದ ರಾಜ್ಯ ಉಪಾಧ್ಯಕ್ಷ ವಿನಯ್ ಬಿದರಮಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Written by - Zee Kannada News Desk | Last Updated : Jun 10, 2022, 10:41 AM IST
  • ಬಿಜೆಪಿ ಶಾಸಕ ಪಿ.ರಾಜೀವ್ ಮನೆಮುಂದೆ ಕಾಂಗ್ರೆಸ್ ಕಾರ್ಯಕರ್ತರಿಂದ ಚಡ್ಡಿ ಅಭಿಯಾನ
  • RSS ಚಡ್ಡಿ ಸುಟ್ಟು ಪಿ.ರಾಜೀವ್ ಮನೆಮುಂದೆ ಬೂದಿ ಇಟ್ಟು ‘ಕೈ’ ಕಾರ್ಯಕರ್ತರ ಪ್ರತಿಭಟನೆ
  • NSUIದ ರಾಜ್ಯ ಉಪಾಧ್ಯಕ್ಷ ವಿನಯ್ ಬಿದರಮಳಿ ನೇತೃತ್ವದಲ್ಲಿ ಪ್ರತಿಭಟನೆ
Chaddi Campaign: ಚಡ್ಡಿ ಸುಟ್ಟು ಶಾಸಕ ಪಿ.ರಾಜೀವ್ ಮನೆಮುಂದೆ ಬೂದಿ ಇಟ್ಟರು! title=
ಕಾಂಗ್ರೆಸ್ ಕಾರ್ಯಕರ್ತರಿಂದ ಚಡ್ಡಿ ಅಭಿಯಾನ

ಚಿಕ್ಕೋಡಿ: RSS ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಪ್ರಯುಕ್ತ ಚಡ್ಡಿ ಸುಟ್ಟು ಶಾಸಕ ಪಿ.ರಾಜೀವ್ ಮನೆಮುಂದೆ ಪ್ರತಿಭಟನಾಕಾರರು ಬೂದಿ ಇಟ್ಟಿದ್ದಾರೆ.

RSS ಚಡ್ಡಿ ಅಣಕು ಶವಯಾತ್ರೆ ಮಾಡಿದ ಕಾಂಗ್ರೆಸ್ ಪಕ್ಷದ ಕಾರ್ಯರ್ಕತರು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: Video : ಚಲಿಸುತ್ತಿದ್ದ ರೈಲಿನಡಿ ಸಿಲುಕಿದ ಮಹಿಳೆಯನ್ನು ರಕ್ಷಿಸಿದ ರೈಲ್ವೇ ಪೊಲೀಸ್​ ಸಿಬ್ಬಂದಿ

ಬಿಜೆಪಿ ಹಾಗೂ RSS ಸಂಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ‘ಕೈ’ ಕಾರ್ಯಕರ್ತರು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕರ್ನಾಟಕ(NSUI)ದ ರಾಜ್ಯ ಉಪಾಧ್ಯಕ್ಷ ವಿನಯ್ ಬಿದರಮಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಸ್ಮಶಾನದಲ್ಲಿ RSS ಚಡ್ಡಿ ಸುಟ್ಟು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಕುಡಚಿ ಶಾಸಕ ಪಿ.ರಾಜೀವ್ ನಿವಾಸದ ಎದುರು ಬೂದಿ ಮಡಿಕೆ ಇಟ್ಟು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಎರಡು ತಲೆ ಹಾವು: ಸಚಿವ ಶ್ರೀರಾಮುಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ’ ಹೇಳಿದ್ದರು. ‘RSSನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ. ಹೀಗಾಗಿ ನಾವು ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುತ್ತೇವೆಂದು’ ಗುಡುಗಿದ್ದರು.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News