ಕಾಂಗ್ರೆಸ್, ಬಿಜೆಪಿ ಪರ್ಸೆಂಟೇಜ್ ಸರಕಾರ ; ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ರಾಷ್ಟ್ರೀಯ ಪಕ್ಷಗಳ ಸರಕಾರಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಪರ್ಸೆಂಟೇಜ್ ಸರಕಾರಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕಲಬುರಗಿ : ರಾಷ್ಟ್ರೀಯ ಪಕ್ಷಗಳ ಸರಕಾರಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಪರ್ಸೆಂಟೇಜ್ ಸರಕಾರಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಜನರ ಹಣ ಲೂಟಿ ಹೊಡೆಯುವುದರಲ್ಲಿ ಹಾಗೂ ಪರ್ಸೆಂಟೇಜ್ ತೆಗೆದುಕೊಳ್ಳುವುದರಲ್ಲಿ ಎರಡೂ ಪಕ್ಷಗಳ ನಡುವೆ ಪೈಪೋಟಿಯೇ ಇದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಎರಡೂ ಪಕ್ಷಗಳ ಭ್ರಷ್ಟಮುಖ ಜನರ ಮುಂದೆ ಅನಾವರಣಗೊಂಡಿದೆ ಎಂದು, ಅವರು ಹೇಳಿದ್ದಾರೆ.
ಸಿಂಧಗಿ ಉಪಚುನಾವಣೆ (Sindagi By election) ಪ್ರಚಾರಕ್ಕೆ ತೆರಳಲು ಕಲಬುರ್ಗಿಗೆ ಆಗಮಿಸಿದದ್ದ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರಕಾರವನ್ನು, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು 10% ಸರಕಾರ ಎಂದು ಕರೆದಿದ್ದರು. ಈಗ ಬಿಜೆಪಿ ಸರ್ಕಾರವನ್ನು (BJP Government) ಕಾಂಗ್ರೆಸ್ 20% ಸರಕಾರ ಎಂದು ಕರೆಯುತ್ತಿದೆ ಎಂದು ವ್ಯಗ್ಯವಾಡಿದ್ದಾರೆ.
ಇದನ್ನೂ ಓದಿ : ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ವರಸೆ ಬದಲಾಯಿಸುವ ಸಿದ್ದರಾಮಯ್ಯ: ಬಿಜೆಪಿ
ಕಾಂಗ್ರೆಸ್ ಪಕ್ಷ (Congress)ಅಧಿಕಾರದಲಿದ್ದಾಗ, ಬೆಂಗಳೂರಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ವಸತಿ ಸಮುಚ್ಛಯ (police quarters) ನಿರ್ಮಾಣ ಮಾಡಲಾಗಿತ್ತು. ಈಗ ಆ ವಸತಿ ಸಮುಚ್ಛಯ ಕುಸಿಯುವ ಭೀತಿ ಎದುರಿಸುತ್ತಿದೆ. ರಾಜ್ಯವನ್ನು ರಕ್ಷಣೆ ಮಾಡುವ ಪೊಲೀಸ್ ಕುಟುಂಬಗಳು ಅಪಾಯಕ್ಕೆ ಸಿಲುಕಿವೆ. ಇದಕ್ಕೆ ಕಳಪೆ ಕಾಮಗಾರಿ, ಪರ್ಸಂಟೇಜ್ ವ್ಯವಹಾರವೇ ಕಾರಣ ಎಂದು ಕುಮಾರಸ್ವಾಮಿ (HDK) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕಕ್ಕೆ ರಾಷ್ಟ್ರೀಯ ಪಕ್ಷಗಳ ಕೊಡುಗೆ ಏನು ಎನ್ನುವುದು ರಾಜ್ಯದ ಜನತೆಗೆ ಅರ್ಥವಾಗಿದೆ. ಇನ್ನಾದರೂ, ಜನತೆ ನಾಡಿನ ಬಗ್ಗೆ ಕಾಳಜಿ ಇರುವ ಜೆಡಿಎಸ್ (JDS) ಪಕ್ಷವನ್ನು ಬೆಂಬಲಿಸುಂತಾಗಲಿ ಎಂದು ಆಶಿಸಿದ್ದಾರೆ.
ಇದನ್ನೂ ಓದಿ : ರೈತನ ಮಗನಿಗೆ ಒಲಿದ ಚಿನ್ನದ ಪದಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.