ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಲಿರುವ 11 ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಜೂನ್ 17ರಂದು 11 ಸದಸ್ಯರು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ಭರ್ತಿ ಮಾಡಲು ಜೂನ್ 11ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿರುವ ಸಂಖ್ಯಾಬಲಕ್ಕೆ ಅನುಗುಣವಾಗಿ ಬಿಜೆಪಿ 5, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ್ ಕುಮಾರ್ ಎಸ್.ಅರಳಿ ಹಾಗೂ ಕೆ.ಹರೀಶ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ. ಸಿ.ಎಂ.ಇಬ್ರಾಹಿಂ ಮತ್ತು ಕೆ.ಗೋವಿಂದರಾಜು ಅವರಿಗೆ ಪುನಃ ಅವಕಾಶ ನೀಡಿದೆ.
INC COMMUNIQUE
Announcement of the candidates for the biennial elections to the Legislative Council of Karnataka. pic.twitter.com/1jZugePetG
— INC Sandesh (@INCSandesh) May 30, 2018